ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ತಿಳಿಸಿದ್ದಾರೆ. ದೇಶದಲ್ಲಿ ರಾಜಕೀಯ ಹಾಗೂ ಮಿಲಿಟರಿ ವಲಯದಲ್ಲಿ ಬಿಕ್ಕಟ್ಟು ಎದುರಾಗಿರುವ ನಡುವೆಯೇ ಅವರ ಈ ಹೇಳಿಕೆ ಮಹತ್ವ ಪಡೆದಿದೆ.
ಮಾಜಿ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಸಾವಿನ ಬಳಿಕ ಅಧಿಕಾರ ವಹಿಸಿಕೊಂಡಿರುವ ಮೊಜ್ತಬಾ ಖಮೇನಿ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಅವರು ಲಿಖಿತ ಆದೇಶಗಳ ಮೂಲಕವೇ ಆಡಳಿತ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಅಧ್ಯಕ್ಷ ಪೆಜೆಶ್ಕಿಯಾನ್, “ಮೊಜ್ತಬಾ ಖಮೇನಿ ಅವರನ್ನು ಸಂಪರ್ಕಿಸುವುದು ಸವಾಲಿನ ಕೆಲಸ. ಆದರೆ ಅವರು ನಮ್ಮೊಂದಿಗಿದ್ದಾರೆ ಎಂಬ ನಂಬಿಕೆ ನಮಗೆ ಶಕ್ತಿ ನೀಡುತ್ತದೆ. ಅವರ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ” ಎಂದು ಹೇಳಿದ್ದಾರೆ.
ಇದೇ ವೇಳೆ, ಮೊಜ್ತಬಾ ಖಮೇನಿ ಅವರು ಇರಾನ್ ಅಧ್ಯಕ್ಷರಿಗಿಂತ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನಾಯಕತ್ವಕ್ಕೆ ಹೆಚ್ಚಿನ ಆಡಳಿತಾತ್ಮಕ ಮತ್ತು ಭದ್ರತಾ ನಿರ್ಧಾರಗಳ ಅಧಿಕಾರ ನೀಡಿದ್ದಾರೆ ಎಂಬ ವರದಿಗಳೂ ಹರಿದಾಡುತ್ತಿವೆ. ಇದರಿಂದ ದೇಶದ ಆಡಳಿತ ವ್ಯವಸ್ಥೆಯಲ್ಲಿ ಬಿಕ್ಕಟ್ಟು ಉಂಟಾಗಿದ್ದು, ಅಧ್ಯಕ್ಷರ ಅಧಿಕಾರವೂ ಸೀಮಿತಗೊಂಡಿದೆ ಎನ್ನಲಾಗಿದೆ.
ಇರಾನ್‌ನಲ್ಲಿ ಸುಪ್ರೀಂ ಲೀಡರ್ ಹುದ್ದೆಯೇ ಅತ್ಯುನ್ನತ ಅಧಿಕಾರ ಹೊಂದಿದ್ದು, ದೇಶದ ಪ್ರಮುಖ ರಾಜಕೀಯ, ಮಿಲಿಟರಿ ಹಾಗೂ ವಿದೇಶಾಂಗ ನೀತಿಗಳ ನಿರ್ಧಾರಗಳಲ್ಲಿ ಅಂತಿಮ ಅಧಿಕಾರ ಅವರದ್ದೇ ಆಗಿರುತ್ತದೆ. ಈ ಬೆಳವಣಿಗೆಗಳು ಅಮೆರಿಕ ಹಾಗೂ ಇಸ್ರೇಲ್ ಸೇರಿದಂತೆ ಇತರ ರಾಷ್ಟ್ರಗಳೊಂದಿಗಿನ ರಾಜತಾಂತ್ರಿಕ ಸಂಬಂಧಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…