ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಗುತ್ತಿಗೆದಾರ ಸಂಸ್ಥೆಯಾದ ಕೆಎನ್‌ಆರ್‌ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ ಸೇತುವೆ ಸಮೀಪ ಲೀಸ್ ಆಧಾರದಲ್ಲಿ ಬಳಸುತ್ತಿದ್ದ ಖಾಸಗಿ ಜಾಗವನ್ನು ತೆರವುಗೊಳಿಸಿದೆ.
ಈ ಬೆಳವಣಿಗೆಯಿಂದ ಸಾರ್ವಜನಿಕರಲ್ಲಿ ಕಾಮಗಾರಿ ಅರ್ಧದಲ್ಲೇ ಸ್ಥಗಿತಗೊಂಡಿದೆಯೇ ಎಂಬ ಅನುಮಾನಗಳು ಮೂಡಿದ್ದರೂ, ಅಂತಹ ಯಾವುದೇ ಆತಂಕಕ್ಕೆ ಅವಕಾಶ ಇಲ್ಲ ಎಂದು ಕಂಪನಿ ಸ್ಪಷ್ಟಪಡಿಸಿದೆ.
ಪಾಣೆಮಂಗಳೂರು ಪ್ಲಾಂಟ್‌ನಲ್ಲಿ ಇರಿಸಲಾಗಿದ್ದ ಬಹುತೇಕ ಯಂತ್ರೋಪಕರಣಗಳನ್ನು ಈಗಾಗಲೇ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಯೋಜನೆಯ ಸುಮಾರು 95 ಶೇಕಡಾ ಕಾಮಗಾರಿ ಪೂರ್ಣಗೊಂಡಿರುವುದರಿಂದ ಅಗತ್ಯವಿಲ್ಲದ ಯಂತ್ರೋಪಕರಣಗಳನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಉಳಿದಿರುವ ಕಾಮಗಾರಿಗಳಿಗೆ ಅಗತ್ಯ ಸಿಬ್ಬಂದಿ ಹಾಗೂ ಯಂತ್ರೋಪಕರಣಗಳು ಉಪ್ಪಿನಂಗಡಿ ಸಮೀಪದ ಕಾಂಚನ ಮತ್ತು ನೆಕ್ಕಿಲಾಡಿ ಪ್ಲಾಂಟ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿವೆ.
ಚತುಷ್ಪಥ ಯೋಜನೆಗಾಗಿ ಕಂಪನಿಯು ಒಟ್ಟು ಮೂರು ಪ್ಲಾಂಟ್‌ಗಳನ್ನು ಸ್ಥಾಪಿಸಿತ್ತು. ಈಗಾಗಲೇ ಪೆರ್ನೆವರೆಗೆ ಮುಖ್ಯ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ನೆಕ್ಕಿಲಾಡಿ ಸಮೀಪದ ಕಲ್ಲು ಬ್ಲಾಸ್ಟಿಂಗ್ ಪ್ರದೇಶದಲ್ಲಿ ಅಲ್ಪ ಪ್ರಮಾಣದ ಕಾಮಗಾರಿ ಮಾತ್ರ ಬಾಕಿಯಿದೆ.
ಇದರ ಜೊತೆಗೆ ಚರಂಡಿ ನಿರ್ಮಾಣ, ಸಂಪರ್ಕ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಕೆಲವು ಸಣ್ಣಪುಟ್ಟ ಕಾಮಗಾರಿಗಳು ನಿತ್ಯವೂ ಮುಂದುವರಿಯುತ್ತಿದ್ದು, ಯೋಜನೆಯ ಅಂತಿಮ ಹಂತದ ಕಾರ್ಯಗಳು ವೇಗವಾಗಿ ಸಾಗುತ್ತಿವೆ ಎಂದು ಕೆಎನ್‌ಆರ್‌ಸಿಎಲ್ ಕಂಪನಿ ಮಾಹಿತಿ ನೀಡಿದೆ.
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…