ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಬಿ.ಸಿ.ರೋಡ್‌ನ ಎನ್.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಮೂಲಕ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಗುರುವಾರ ಸಂಜೆ ಸುಮಾರು 6.30ರ ವೇಳೆಗೆ ಕಲ್ಲಡ್ಕ ಕಡೆಯಿಂದ ಲೊರೆಟ್ಟೊ ಕಡೆಗೆ ತೆರಳುತ್ತಿದ್ದ KA-19-AF-8073 ನೋಂದಣಿಯ ಟಿಪ್ಪರ್ ಲಾರಿಯು ಮಂಗಳೂರು ಕಡೆಯಿಂದ ಧರ್ಮಸ್ಥಳದತ್ತ ಸಾಗುತ್ತಿದ್ದ KA-70-H-5059 ನೋಂದಣಿಯ ಸ್ಕೂಟರ್‌ಗೆ ಡಿಕ್ಕಿ ಹೊಡೆದಿತ್ತು. ಲಾರಿಯನ್ನು ಪಲ್ಲಮಜಲು ನಿವಾಸಿ ಸಲ್ಮಾನ್ ಫಾರುಕ್ (33) ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಅಪಘಾತದಲ್ಲಿ ಸ್ಕೂಟರ್ ಸವಾರ ಪಾಣೆಮಂಗಳೂರು ಸಮೀಪದ ಬೋರುಗುಡ್ಡೆಯ ದಯಾನಂದ ಹಾಗೂ ಹಿಂಬದಿ ಸವಾರ ನಾಯಿಲ ನಿವಾಸಿ ಯಶ್ವಂತ್ ಕುಲಾಲ್ ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಇಬ್ಬರನ್ನೂ ತಕ್ಷಣ ಮಂಗಳೂರಿನ ಜಿಲ್ಲಾ ಸರ್ಕಾರಿ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ವೇಳೆ ಮೊದಲು ಯಶ್ವಂತ್ ಕುಲಾಲ್ ಮೃತಪಟ್ಟಿದ್ದು, ಬಳಿಕ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಯಾನಂದ ಕೂಡ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟ ಇಬ್ಬರೂ ಪರಸ್ಪರ ಸಂಬಂಧಿಕರು ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 99/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 281, 125(ಎ) ಹಾಗೂ 106(1) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಟಿಪ್ಪರ್ ಲಾರಿ ಚಾಲಕ ಸಲ್ಮಾನ್ ಫಾರುಕ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ. ಈ ದುರಂತದ ಬಳಿಕ ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭಾರೀ ವಾಹನಗಳ ಅತಿವೇಗ ಹಾಗೂ ನಿರ್ಲಕ್ಷ್ಯ ಚಾಲನೆಗೆ ಕಡಿವಾಣ ಹಾಕುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!