ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ ಬಸ್‌ಗಳ ವ್ಯವಸ್ಥೆ ಮಾಡಲಾಗಿತ್ತು. ಈ ಸೌಲಭ್ಯಕ್ಕೆ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಮುಂದಾಳತ್ವದಲ್ಲಿ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನದ ಸಮೀಪದಿಂದ ಬೆಳಿಗ್ಗೆ ಬಸ್‌ಗಳು ಹೊರಟಿದ್ದು, ಉದ್ಯೋಗ ಮೇಳದಲ್ಲಿ ಭಾಗವಹಿಸಲು ನೂರಾರು ಅಭ್ಯರ್ಥಿಗಳು ಉತ್ಸಾಹದಿಂದ ಪ್ರಯಾಣ ಬೆಳೆಸಿದರು.

ಉಚಿತ ಸಾರಿಗೆ ವ್ಯವಸ್ಥೆಯಿಂದ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉದ್ಯೋಗ ಮೇಳ ತಲುಪುವುದು ಸುಲಭವಾಗಿದ್ದು, ದೂರದ ಊರುಗಳಿಂದ ಬಂದ ಯುವಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡರು. ಈ ವ್ಯವಸ್ಥೆಯಿಂದ ಪ್ರಯಾಣ ವೆಚ್ಚದ ಹೊರೆ ಕಡಿಮೆಯಾಗಿದ್ದು, ಹೆಚ್ಚಿನ ಸಂಖ್ಯೆಯ ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಭಾಗವಹಿಸಲು ಸಾಧ್ಯವಾಯಿತು.

ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳದಲ್ಲಿ ವಿವಿಧ ಕ್ಷೇತ್ರಗಳ ಪ್ರಮುಖ ಕಂಪನಿಗಳು ಭಾಗವಹಿಸಿದ್ದು, ಸಾವಿರಾರು ಉದ್ಯೋಗಾವಕಾಶಗಳನ್ನು ಒದಗಿಸಲಾಗುತ್ತಿದೆ. ಜಿಲ್ಲೆಯ ವಿವಿಧ ಭಾಗಗಳಷ್ಟೇ ಅಲ್ಲದೆ ರಾಜ್ಯದ ಹಲವು ಜಿಲ್ಲೆಗಳಿಂದಲೂ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!