ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ ಹಲವು ಪ್ರಶ್ನೆಗಳು ಎದ್ದಿರುವ ನಡುವೆಯೇ ಮತ್ತೊಂದು ಕುತೂಹಲಕಾರಿ ವರದಿ ಹೊರಬಿದ್ದಿದೆ. ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಟೆಹ್ರಾನ್‌ನ ರಹಸ್ಯ ಸ್ಥಳವೊಂದರಲ್ಲಿ ಮೊಜ್ತಬಾ ಖಮೇನಿ ಅವರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದ್ದು, ಆ ಭೇಟಿಯ ಸಂದರ್ಭದಲ್ಲೂ ಅವರಿಗೆ ಖಮೇನಿ ಅವರ ಮುಖವೇ ಸ್ಪಷ್ಟವಾಗಿ ಕಾಣಲಿಲ್ಲ ಎಂಬ ಮಾಹಿತಿ ಬೆಳಕಿಗೆ ಬಂದಿದೆ.
‘ಇರಾನ್ ಇಂಟರ್‌ನ್ಯಾಷನಲ್’ ವರದಿ ಪ್ರಕಾರ, ಟೆಹ್ರಾನ್‌ನ ಅಜ್ಞಾತ ಸ್ಥಳದಲ್ಲಿ ಕಪ್ಪು ಗಾಜು ಹೊಂದಿದ್ದ ಕಾರಿನ ಹಿಂಬದಿ ಸೀಟಿನಲ್ಲಿ ಖಮೇನಿ ಇದ್ದರೆಂದು ಹೇಳಲಾದ ವ್ಯಕ್ತಿಯನ್ನು ಅಧ್ಯಕ್ಷ ಪೆಜೆಶ್ಕಿಯಾನ್ ಭೇಟಿಯಾಗಿದ್ದರು. ಆದರೆ ಕಾರಿನೊಳಗೆ ಸಂಪೂರ್ಣ ಕತ್ತಲೆ ಇದ್ದ ಕಾರಣ ಆ ವ್ಯಕ್ತಿಯ ಮುಖ ಗುರುತಿಸಲು ಸಾಧ್ಯವಾಗಲಿಲ್ಲ. ಇದರಿಂದ “ನೀವು ನಿಜವಾಗಿಯೂ ಮೊಜ್ತಬಾ ಖಮೇನಿಯೇ?” ಎಂದು ಅಧ್ಯಕ್ಷರು ಪ್ರಶ್ನಿಸಿದ್ದರೆಂದು ವರದಿ ತಿಳಿಸಿದೆ.
ಇರಾನ್‌ನಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿರುವ ಸಂದರ್ಭದಲ್ಲಿ ಹಾಗೂ ಅಧ್ಯಕ್ಷ ಪೆಜೆಶ್ಕಿಯಾನ್ ರಾಜೀನಾಮೆ ನೀಡುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿದ್ದ ಹಿನ್ನೆಲೆ ಈ ಭೇಟಿ ಆಯೋಜಿಸಲಾಗಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಭೇಟಿಯ ವೇಳೆ ಅಧ್ಯಕ್ಷರಿಗೆ ಖಮೇನಿ ಅವರೊಂದಿಗೆ ಹಸ್ತಲಾಘವ ಮಾಡುವ ಅವಕಾಶವೂ ಸಿಗಲಿಲ್ಲ ಎನ್ನಲಾಗಿದೆ. ಅಧ್ಯಕ್ಷರೊಂದಿಗೆ ನಡೆದುಕೊಂಡ ರೀತಿಯಿಂದ ಅವರು ತೀವ್ರ ಅಸಮಾಧಾನಗೊಂಡಿದ್ದರು ಎಂದು ಅಧ್ಯಕ್ಷರ ಕಚೇರಿಯ ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ. ಬಳಿಕ ಮತ್ತೊಮ್ಮೆ ಭೇಟಿಗೆ ಮನವಿ ಮಾಡಿದರೂ ಅದನ್ನು ತಕ್ಷಣವೇ ತಿರಸ್ಕರಿಸಲಾಗಿದೆ ಎಂದು ತಿಳಿಸಲಾಗಿದೆ.
ಫೆಬ್ರವರಿಯಲ್ಲಿ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಮಾಜಿ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದರು. ಆ ದಾಳಿಯಲ್ಲಿ ಮೊಜ್ತಬಾ ಖಮೇನಿ ಕೂಡ ಗಂಭೀರವಾಗಿ ಗಾಯಗೊಂಡಿದ್ದರು ಎಂಬ ವರದಿಗಳು ಈ ಹಿಂದೆ ಪ್ರಕಟವಾಗಿದ್ದವು. ಅವರು ತಮ್ಮ ತಂದೆಯ ಅಂತ್ಯಕ್ರಿಯೆಯಲ್ಲೂ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ.
ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಇರಾನ್‌ನ ಉನ್ನತ ನಾಯಕತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಿ, “ಮೊಜ್ತಬಾ ಖಮೇನಿ ಜೀವಂತವಾಗಿದ್ದಾರೋ ಇಲ್ಲವೋ ಗೊತ್ತಿಲ್ಲ” ಎಂದು ಹೇಳಿದ್ದರು.
ಈ ನಡುವೆ ಇರಾನ್‌ನಲ್ಲಿ ನಾಗರಿಕ ಸರ್ಕಾರಕ್ಕಿಂತ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪ್ರಭಾವ ಹೆಚ್ಚಾಗಿದ್ದು, ಸುಪ್ರೀಂ ಲೀಡರ್ ಅವರನ್ನು ಸಂಪರ್ಕಿಸುವುದು ಅತ್ಯಂತ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಪೆಜೆಶ್ಕಿಯಾನ್ ಇತ್ತೀಚೆಗೆ ಒಪ್ಪಿಕೊಂಡಿದ್ದರು.
ಇದೀಗ ಹೊರಬಿದ್ದಿರುವ ವರದಿ ಹೊಸ ಅನುಮಾನಗಳಿಗೆ ಕಾರಣವಾಗಿದ್ದು, ಅಧ್ಯಕ್ಷರನ್ನು ಸಮಾಧಾನಪಡಿಸಲು ಖಮೇನಿ ಅವರನ್ನು ಹೋಲುವ ವ್ಯಕ್ತಿಯನ್ನು ಕಾರಿನಲ್ಲಿ ಕೂರಿಸಿ ಭೇಟಿ ಮಾಡಿಸಲಾಗಿತ್ತೇ ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ. ಆದರೆ ಈ ವರದಿಯನ್ನು ಇರಾನ್ ಸರ್ಕಾರ ಅಧಿಕೃತವಾಗಿ ದೃಢಪಡಿಸಿಲ್ಲ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…