ಕರಾವಳಿ

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಒಂದು ತಿಂಗಳೊಳಗೆ ಸಮಸ್ಯೆ ಪರಿಹರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಮಂಗಳೂರು ನಗರದ ಅಂಬೇಡ್ಕರ್ ಭವನದಲ್ಲಿ ದಿವಂಗತ ದಲಿತ ಮುಖಂಡ ಎಂ. ದೇವದಾಸ್ ಅವರ ನುಡಿನಮನ ಕಾರ್ಯಕ್ರಮದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಂಚಾಲಕ ಸೋಮಶೇಖರ್ ಮಾತನಾಡಿದರು.

ಮಂಗಳೂರಿನಲ್ಲಿ ಹಿಂದೆ ಸುಮಾರು 8,500 ಎಕರೆ ಡಿಸಿ ಮನ್ನಾ ಭೂಮಿ ಇದ್ದು, ಅದರಲ್ಲಿ ಬಹುಪಾಲು ಒತ್ತುವರಿಯಾಗಿದೆ ಎಂದು ಅವರು ಆರೋಪಿಸಿದರು. ಪ್ರಸ್ತುತ ಉಳಿದಿರುವ ಸುಮಾರು 190 ಎಕರೆ ಭೂಮಿಯನ್ನು ನಿವೇಶನ ರಹಿತ ಬಡವರು ಹಾಗೂ ಶೋಷಿತ ಸಮುದಾಯಗಳಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.

ಈ ಸಂಬಂಧ 5,590 ಮಂದಿ ಅರ್ಜಿ ಸಲ್ಲಿಸಿದ್ದು, 2017ರಿಂದ ಕಡತ ಸರ್ಕಾರದ ಮಟ್ಟದಲ್ಲಿ ಬಾಕಿ ಉಳಿದಿದೆ. 2024ರಲ್ಲಿಯೂ ಜಿಲ್ಲಾಡಳಿತವು ಕಂದಾಯ ಇಲಾಖೆಗೆ ಪತ್ರ ಬರೆದಿದ್ದರೂ, ಈವರೆಗೆ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಸೋಮಶೇಖರ್ ಆರೋಪಿಸಿದರು.

ಕಂದಾಯ ಸಚಿವ ಜಿ. ಪರಮೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಒಂದು ತಿಂಗಳೊಳಗೆ ಸಮಸ್ಯೆ ಬಗೆಹರಿಸದಿದ್ದರೆ ಕಂದಾಯ ಸಚಿವರ ನಿವಾಸದ ಮುಂದೆ ಸೇರಿದಂತೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಸೋಮಶೇಖರ್ ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಶ್ರೀಧರ್, ವೆಂಕಟಗಿರಿ, ಕೋಲಾರ ನಾರಾಯಣಸ್ವಾಮಿ, ಅಂಧಾನಿ ಸೋಮನಹಳ್ಳಿ, ಶಿವಮೂರ್ತಿ, ಸದಾಶಿವ ಪಡುಬಿದ್ರೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…

2 hours ago

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…

2 hours ago

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…

2 hours ago

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…

2 hours ago

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್‌ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…

2 hours ago

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…

3 days ago