ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ ಸನ್ಮಾನ ಕಾರ್ಯಕ್ರಮ ಕದ್ರಿ ಬಂಜನ್ ಚಾವಡಿಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೈಸೂರು ಹಿಲ್‌ಸೈಡ್ ಆರ್ಕಿಟೆಕ್ಟ್‌ನ ವ್ಯವಸ್ಥಾಪಕ ನಿರ್ದೇಶಕ ರಾಧಾಕೃಷ್ಣ ಬಂಜನ್, ದೇಶದ ಭದ್ರತೆಗೆ ಪಾಕಿಸ್ತಾನ, ಚೀನಾ ಸೇರಿದಂತೆ ಬಾಹ್ಯ ಶಕ್ತಿಗಳಿಂದ ಮಾತ್ರವಲ್ಲದೆ, ದೇಶದೊಳಗಿನ ದೇಶದ್ರೋಹಿಗಳಿಂದಲೂ ಸವಾಲು ಎದುರಾಗುತ್ತಿದೆ ಎಂದು ಹೇಳಿದರು.

ಇಂತಹ ಸವಾಲುಗಳನ್ನು ನಿಯಂತ್ರಿಸುವುದು ಅತ್ಯಂತ ಕಷ್ಟದ ಕಾರ್ಯ. ಆದರೆ ದೇಶದ ಸೈನಿಕರು ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆ ಮತ್ತು ತ್ಯಾಗದಿಂದಾಗಿ ಕೋಟ್ಯಂತರ ಜನರು ಸುರಕ್ಷಿತವಾಗಿ ಬದುಕಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬಿಎಸ್‌ಎಫ್‌ನ ನಿವೃತ್ತ ಕಮಾಂಡೆಂಟ್ ಡಿ. ಚಂದಪ್ಪ ಮೂಲ್ಯ, ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಅಧ್ಯಕ್ಷ ಸುಂದರ್ ಕುಲಾಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.



