ನಂದಳಿಕೆ: ಮಾವಿನಕಟ್ಟೆ ಬಸ್ ತಂಗುದಾಣದಲ್ಲಿ ಬೀದಿ ನಾಯಿಯೊಂದು ಸತ್ತು ಬಿದ್ದಿದ್ದು ಸಾರ್ವಜನಿಕರು ನಂದಳಿಕೆ ಗ್ರಾಮ ಪಂಚಾಯತ್ ಗೆ ದೂರು ನೀಡಿದ ಹಿನ್ನೆಲೆ, ಮೃತ ದೇಹವನ್ನು ತೆರವುಗೊಳಿಸುವುದರ ಬದಲು ಸತ್ತ ನಾಯಿಯ ಮೇಲೆ ಮಣ್ಣು ಸುರಿದು ಹೋದ ಘಟನೆ ವರದಿಯಾಗಿದೆ. ಸತ್ತ ನಾಯಿಯ ದಫನ ಮಾಡುವ ಮೂಲಕ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿಕೊಳ್ಳಲು ಸ್ಥಳೀಯಾಡಳಿ ಮುಂದಾಗಬೇಕಿತ್ತು. ಆದರೆ ನಂದಳಿಕೆ ಗ್ರಾಮ ಪಂಚಾಯತ್ ಆಡಳಿತ ವರ್ಗವು ತಂಗುದಾಣದಲ್ಲಿ ಸತ್ತು ಬಿದ್ದ ನಾಯಿಯ ಮೇಲೆ ಒಂದು ಲೋಡ್ ಮಣ್ಣು ತಂದು ಹಾಕಿರುವ ಮೂಲಕ ವಿಶಿಷ್ಠ ರೀತಿಯಲ್ಲಿ ದಫನಕ್ರಿಯೆ ನಡೆಸಿರುವುದು ಕಂಡು ಬಂದಿದೆ.
ಇದೀಗ ಮಳೆ ಸುರಿಯುತ್ತಿರುವ ಹಿನ್ನೆಲೆ ಜನ ಬಸ್ಸ್ಟಾಂಡ್ ನಲ್ಲಿ ನಿಲ್ಲಲು ಸಾಧ್ಯವಾಗದೆ ರಸ್ತೆ ಬದಿ ನಿಲುವಂತಾಗಿದ್ದು ಪಂಚಾಯತ್ ನ ಈ ನಡೆಗೆ ಸಾರ್ವಜನಿಕರು ತೀರ್ವ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…