ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

ಪುದು ಗ್ರಾಮ ಪಂಚಾಯಿತಿ ಹಾಗೂ ಮನಸ್ವಿನಿ ಸಂಜೀವಿನಿ ಒಕ್ಕೂಟದ ಸಹಭಾಗಿತ್ವದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವನ್ನು ಪುದು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು.

ಆಟಿ ತಿಂಗಳ ಸಂಭ್ರಮವನ್ನು ಸಾಂಪ್ರದಾಯಿಕವಾಗಿ ಆಚರಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಆಟಿ ತಿಂಗಳ ವಿಶೇಷ ತಿನಿಸು-ತಿಂಡಿಗಳನ್ನು ಪರಿಚಯಿಸುವುದರ ಜೊತೆಗೆ, ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಹಾಗೂ ಆಚರಣೆಗಳನ್ನು ಬಿಂಬಿಸುವ ವಿವಿಧ ಕಾರ್ಯಕ್ರಮಗಳು ನಡೆದವು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ ಮಾಜಿ ಜಿ.ಪಂ. ಸದಸ್ಯ ಉಮ್ಮರ್ ಫಾರೂಕ್, ಆಟಿ ತಿಂಗಳು ತುಳುನಾಡಿನ ಜೀವನ ಪದ್ಧತಿ ಹಾಗೂ ಸಂಸ್ಕೃತಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದೆ ಎಂದರು.

ಹಿಂದಿನ ಕಾಲದಲ್ಲಿ ಆಟಿ ತಿಂಗಳನ್ನು ಕಷ್ಟದ ತಿಂಗಳು ಎಂದು ಪರಿಗಣಿಸಲಾಗುತ್ತಿತ್ತು. ಆದರೆ, ಆ ಅವಧಿಯಲ್ಲಿ ಸ್ಥಳೀಯವಾಗಿ ಲಭ್ಯವಿದ್ದ ಸೊಪ್ಪು, ತರಕಾರಿ ಹಾಗೂ ಔಷಧೀಯ ಗುಣಗಳನ್ನು ಹೊಂದಿರುವ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಆರೋಗ್ಯ ಕಾಪಾಡಿಕೊಳ್ಳುವ ಪದ್ಧತಿ ಇತ್ತು ಎಂದು ಹೇಳಿದರು.

ಇಂತಹ ಸಾಂಪ್ರದಾಯಿಕ ಆಹಾರ ಪದ್ಧತಿ, ಆಚರಣೆ ಹಾಗೂ ತುಳುನಾಡಿನ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವಾಗಬೇಕು ಎಂದು ಉಮ್ಮರ್ ಫಾರೂಕ್ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸ್ಥಳೀಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!