ಜನ ಮನದ ನಾಡಿ ಮಿಡಿತ

Advertisement

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

ಹಿಂದು ಜಾಗರಣ ವೇದಿಕೆ ವಾಮದಪದವು ವಲಯ, ಬಂಟ್ವಾಳ ತಾಲೂಕು ಹಾಗೂ ಮಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅಖಂಡ ಭಾರತ ಸಂಕಲ್ಪ ದಿನ ಆಚರಿಸಲಾಯಿತು.

ಇದರ ಅಂಗವಾಗಿ ವಾಮದಪದವು ಪೇಟೆಯಲ್ಲಿ ಪಂಜಿನ ಮೆರವಣಿಗೆ ನಡೆಸಲಾಗಿದ್ದು, ಬಳಿಕ ಗಣೇಶ ಮಂಟಪದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೋಹನ್ ಶೆಟ್ಟಿ ನರವಲ್ದಡ್ಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಗತಿಪರ ಕೃಷಿಕ ಬೂಬಾ ಪೂಜಾರಿ ಹಾಗೂ ಮಂಗಳೂರು ಗ್ರಾಮಾಂತರ ಜಿಲ್ಲೆಯ ಹಿಂದು ಜಾಗರಣ ವೇದಿಕೆ ಸಹ ಸಂಯೋಜಕ ಪದ್ಮನಾಭ ಭಂಡಾರಿ ಉಪಸ್ಥಿತರಿದ್ದರು.

ಹಿಂದು ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಮಹೇಶ್ ಕಡಗದಾಳು ದಿಕ್ಸೂಚಿ ಭಾಷಣ ಮಾಡಿದರು. ಈ ವೇಳೆ ದೇಶ ವಿಭಜನೆಯ ಸಂದರ್ಭದ ಕುರಿತು ವಿವರಿಸಿದ ಅವರು, ಯುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ರಾಷ್ಟ್ರೀಯ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

error: Content is protected !!