ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಶವ ಬಾವಿಯಲ್ಲಿ ಪತ್ತೆಯಾದ ಪ್ರಕರಣ ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯಲ್ಲಿ ನಡೆದಿದೆ.ಅರಸಿನಮಕ್ಕಿ ಕುಂಟಾಲಪಳಿಕೆ ನಿವಾಸಿ ಹರೀಶ್ ಆಚಾರ್ಯ (40) ಅವರು ಎರಡು ದಿನದಿಂದ ನಾಪತ್ತೆಯಾಗಿದ್ದು, ಬೆಳಗ್ಗೆ ಅವರ ತಂದೆ ಮನೆಯ ಬಾವಿಯಲ್ಲಿ ಶವ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ತಂದೆ ತಾಯಿ ಅಕ್ಕಾಪಕ್ಕದಲ್ಲಿ ಬೇರೆ ಬೇರೆ ಮನೆಗಳಲ್ಲಿ ವಾಸಿಸುತ್ತಿದ್ದು ಹರೀಶ್ ತಾಯಿ ಮನೆಯಲ್ಲಿ ವಾಸಿಸುತ್ತಿದ್ದರು. ಹರೀಶ್ ಅವಿವಾಹಿತರು. ಹರೀಶ್ ಆಚಾರ್ಯ ಅವರು ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಾರೆಯೇ? ಅಥವಾ ಇನ್ನೇನಾದರೂ ಘಟನೆ ನಡೆದಿರಬಹುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



