ಜನ ಮನದ ನಾಡಿ ಮಿಡಿತ

Advertisement

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಹೆರ್ಗಾ ಗ್ರಾಮದ ಕೆಳಪರ್ಕಳ ಡೌನ್‌ನಲ್ಲಿ ನಡೆದಿದೆ.

ಮೃತರನ್ನು ಆತ್ರಾಡಿ ನಿವಾಸಿ ಸನತ್ ಎಂದು ಗುರುತಿಸಲಾಗಿದೆ. ಅವರು ಮಣಿಪಾಲದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸನತ್ ಅವರು ಸ್ನೇಹಿತರೊಂದಿಗೆ ಮಣಿಪಾಲಕ್ಕೆ ಬಂದು ಊಟ ಮುಗಿಸಿ, ರಾತ್ರಿ ಸುಮಾರು 1.25ರ ವೇಳೆಗೆ ಸ್ನೇಹಿತನಿಗೆ ಸೇರಿದ ಬುಲೆಟ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಹೆರ್ಗಾ ಗ್ರಾಮದ ಕೆಳಪರ್ಕಳ ಡೌನ್‌ನ ಗೋಪಾಲಕೃಷ್ಣ ದೇವಸ್ಥಾನದ ಬಳಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಸನತ್ ಬೈಕ್ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟಿದ್ದು, ತಲೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಘಟನೆ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!