ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಹೆರ್ಗಾ ಗ್ರಾಮದ ಕೆಳಪರ್ಕಳ ಡೌನ್‌ನಲ್ಲಿ ನಡೆದಿದೆ.
ಮೃತರನ್ನು ಆತ್ರಾಡಿ ನಿವಾಸಿ ಸನತ್ ಎಂದು ಗುರುತಿಸಲಾಗಿದೆ. ಅವರು ಮಣಿಪಾಲದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸನತ್ ಅವರು ಸ್ನೇಹಿತರೊಂದಿಗೆ ಮಣಿಪಾಲಕ್ಕೆ ಬಂದು ಊಟ ಮುಗಿಸಿ, ರಾತ್ರಿ ಸುಮಾರು 1.25ರ ವೇಳೆಗೆ ಸ್ನೇಹಿತನಿಗೆ ಸೇರಿದ ಬುಲೆಟ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಹೆರ್ಗಾ ಗ್ರಾಮದ ಕೆಳಪರ್ಕಳ ಡೌನ್‌ನ ಗೋಪಾಲಕೃಷ್ಣ ದೇವಸ್ಥಾನದ ಬಳಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಸನತ್ ಬೈಕ್ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟಿದ್ದು, ತಲೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಘಟನೆ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…