ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ನೂರಾರು ಕಟ್ಟಡಗಳು ಹಾನಿಗೊಳಗಾಗಿವೆ.
ಭೂಕಂಪದ ಬಳಿಕ ಹಲವು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಚೋಕೋ ಪ್ರದೇಶದ ಸ್ಯಾನ್ ಜೋಸ್ ಡೆಲ್ ಪಾಲ್ಮಾರ್ ಸಮೀಪ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ.
ಪೆರೇರಾ, ಕಾಲಿ, ಕ್ವಿಬ್ಡೊ ಮತ್ತು ಮನಿಜಾಲೆಸ್ ಸೇರಿದಂತೆ ಹಲವು ನಗರಗಳಲ್ಲಿ ಭೂಕಂಪದ ತೀವ್ರ ಪರಿಣಾಮ ಕಂಡುಬಂದಿದೆ. ಕಟ್ಟಡಗಳು ಹಾಗೂ ಇತರ ಮೂಲಸೌಕರ್ಯಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಇನ್ನು ನೆರೆಯ ಈಕ್ವೆಡಾರ್ ಮತ್ತು ಪನಾಮದಲ್ಲೂ ಭೂಕಂಪದ ಕಂಪನ ಅನುಭವವಾಗಿದ್ದು, ಸದ್ಯದ ಮಾಹಿತಿ ಪ್ರಕಾರ ಅಲ್ಲಿ ದೊಡ್ಡ ಪ್ರಮಾಣದ ಹಾನಿ ವರದಿಯಾಗಿಲ್ಲ.
ಕೊಲಂಬಿಯಾದ ಭೂವೈಜ್ಞಾನಿಕ ಸೇವೆಯ ಪ್ರಕಾರ, ಕಳೆದ ಒಂದು ದಶಕದಲ್ಲಿ ದೇಶದಲ್ಲಿ ದಾಖಲಾಗಿರುವ ಅತ್ಯಂತ ಪ್ರಬಲ ಭೂಕಂಪ ಇದಾಗಿದೆ. ಭೂಕಂಪದ ಹಿನ್ನೆಲೆಯಲ್ಲಿ ಹಲವು ವಿಮಾನ ನಿಲ್ದಾಣಗಳಲ್ಲಿ ಸೇವೆ ಸ್ಥಗಿತಗೊಳಿಸಲಾಗಿದೆ.
ಆಫ್ಟರ್‌ಶಾಕ್‌ಗಳ ಆತಂಕ ಇರುವುದರಿಂದ ಜನರು ಕಟ್ಟಡಗಳ ಒಳಗೆ ಹೋಗದಂತೆ ಹಾಗೂ ಸಾಧ್ಯವಾದಷ್ಟು ತೆರೆದ ಪ್ರದೇಶಗಳಲ್ಲಿ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ರಕ್ಷಣಾ ತಂಡಗಳು ಅವಶೇಷಗಳಡಿ ಸಿಲುಕಿರುವವರಿಗಾಗಿ ಶೋಧ ಕಾರ್ಯ ಮುಂದುವರಿಸಿವೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…