ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್‌ನ ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ, ಗಲ್ಫ್‌ನಿಂದ ಮಂಗಳೂರಿಗೆ ವಾಪಸಾಗಿದ್ದ ಆಕೆಯ ಸಹೋದರ ಲಾಡ್ಜ್‌ವೊಂದರಲ್ಲಿ ಶವವಾಗಿ ಪತ್ತೆಯಾದ ದಾರುಣ ಘಟನೆ ನಡೆದಿದೆ.
ಕೇರಳದ ಬೇಕಲ್‌ನ ಪಳ್ಳಿಕ್ಕರ ಮುಕೂಡ್ ನಿವಾಸಿ ಮಹೇಶ್ ಅವರ ಪುತ್ರ ಅರ್ಜುನ್ ಮಹೇಶ್ ಮೃತರು. ಕಳೆದ ಜೂನ್‌ನಲ್ಲಿ ಅರ್ಜುನ್ ಅವರ ಸಹೋದರಿ ಐಜಾ ಆರ್. ಮಹೇಶ್ ಅವರು ಕೋಚಿಂಗ್ ಸೆಂಟರ್‌ನ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಗೊಂದಲದ ಬಳಿಕ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಐಜಾ ತೀವ್ರ ಮಾನಸಿಕ ಒತ್ತಡದಲ್ಲಿದ್ದರು ಎನ್ನಲಾಗಿತ್ತು.
ತಂಗಿಯ ಸಾವಿನ ಸುದ್ದಿ ತಿಳಿದು ಗಲ್ಫ್‌ನಿಂದ ಮನೆಗೆ ಬಂದಿದ್ದ ಅರ್ಜುನ್ ಬಳಿಕ ಮತ್ತೆ ಉದ್ಯೋಗಕ್ಕಾಗಿ ಗಲ್ಫ್‌ಗೆ ತೆರಳಿದ್ದರು. ಭಾನುವಾರ ವಿಮಾನದ ಮೂಲಕ ಮಂಗಳೂರಿಗೆ ಬಂದಿಳಿದ ಅವರು, ಮನೆಗೆ ವಾಪಸಾಗುತ್ತಿರುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಅದೇ ದಿನ ಮಧ್ಯಾಹ್ನ ತಾಯಿಗೂ ಕರೆ ಮಾಡಿದ್ದರು ಎನ್ನಲಾಗಿದೆ.
ಬಳಿಕ ಅರ್ಜುನ್ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಆತಂಕಗೊಂಡ ಕುಟುಂಬಸ್ಥರು ಮಂಗಳೂರಿಗೆ ಆಗಮಿಸಿ ಹುಡುಕಾಟ ನಡೆಸಿದ್ದರು. ಈ ವೇಳೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಮರವೂರಿನ ಲಾಡ್ಜ್‌ವೊಂದರಲ್ಲಿ ಅರ್ಜುನ್ ಶವವಾಗಿ ಪತ್ತೆಯಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಬಜ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಒಂದೇ ಕುಟುಂಬದ ಇಬ್ಬರು ಯುವ ಮಕ್ಕಳು ಅಲ್ಪಾವಧಿಯಲ್ಲೇ ಮೃತಪಟ್ಟಿರುವುದು ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ. ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ಬಜ್ಪೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…