ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದರ ಭಾಗವಾಗಿ ಬಂಟ್ವಾಳ ತಾಲೂಕು ಕಚೇರಿಗೂ ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ ನೀಡಿ ವಿವಿಧ ವಿಭಾಗಗಳ ಕಡತಗಳು ಹಾಗೂ ದಾಖಲೆಗಳನ್ನು ಪರಿಶೀಲಿಸಿತು.

ಕಚೇರಿಯಲ್ಲಿನ ಕಡತಗಳ ವಿಲೇವಾರಿ ಸ್ಥಿತಿ, ಬಾಕಿ ಇರುವ ಅರ್ಜಿಗಳು ಹಾಗೂ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ಅಗತ್ಯ ದಾಖಲೆಗಳು ಮತ್ತು ಕಡತಗಳನ್ನು ಪರಿಶೀಲಿಸುವ ಉದ್ದೇಶದಿಂದ ಈ ಭೇಟಿ ನಡೆದಿದೆ ಎಂದು ತಿಳಿದುಬಂದಿದೆ.

ಮೇಲಾಧಿಕಾರಿಗಳ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಲ್ಲೂ ಏಕಕಾಲದಲ್ಲಿ ಪರಿಶೀಲನೆ ಕೈಗೊಳ್ಳಲಾಗಿದ್ದು, ಆಯಾ ಕಚೇರಿಗಳಲ್ಲಿರುವ ಸಂಬಂಧಿತ ಕಡತಗಳು ಹಾಗೂ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!