ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ.

ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಗುಂಡಿಯನ್ನು ತಪ್ಪಿಸಲು ನಿಧಾನವಾಗಿ ಚಲಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಯ ಮಧ್ಯದಲ್ಲೇ ಗುಂಡಿ ಇರುವುದರಿಂದ ಅಪಘಾತದ ಆತಂಕವೂ ಹೆಚ್ಚಾಗಿದೆ.

ಮಳೆ ಸುರಿದ ಸಂದರ್ಭದಲ್ಲಿ ಗುಂಡಿಯಲ್ಲಿ ನೀರು ತುಂಬಿಕೊಳ್ಳುವುದರಿಂದ ವಾಹನ ಸವಾರರಿಗೆ ಗುಂಡಿ ಕಾಣದಂತಾಗುತ್ತಿದೆ. ಪರಿಣಾಮವಾಗಿ ವಾಹನಗಳು ಗುಂಡಿಗೆ ಬಿದ್ದು ಮೇಲೇಳುವಾಗ ಅಕ್ಕಪಕ್ಕದಲ್ಲಿ ಸಂಚರಿಸುವವರಿಗೆ ಕೆಸರು ನೀರಿನ ಸಿಂಚನವಾಗುತ್ತಿದೆ.

ಇದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳು ತೊಂದರೆ ಅನುಭವಿಸುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗಮನಹರಿಸಿ ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ತಿ ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಗುಂಡಿ ಮುಚ್ಚಿದರೆ ಸಂಭಾವ್ಯ ಅಪಘಾತಗಳನ್ನು ತಡೆಗಟ್ಟುವುದರ ಜೊತೆಗೆ ಈ ರಸ್ತೆಯಲ್ಲಿ ಸುಗಮ ಸಂಚಾರಕ್ಕೂ ಅನುಕೂಲವಾಗಲಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!