ಕರಾವಳಿ

ಬಂಟ್ವಾಳ: ಯಕ್ಷಸಿರಿ ಪ್ರಶಸ್ತಿಗೆ ದುರ್ಗಾಪರಮೇಶ್ವರಿ ಕುಕ್ಕಿಲ ಆಯ್ಕೆ

ಈ ಬಾರಿ ಯಕ್ಷಗಾನ ಅಕಾಡೆಮಿ ಘೋಷಿಸಿರುವ ಯಕ್ಷಸಿರಿ ಪ್ರಶಸ್ತಿಗೆ ಬಂಟ್ವಾಳ ತಾಲೂಕಿನ ಕೋಡಪದವು ಕುಕ್ಕಿಲ ನಿವಾಸಿ, ಪರಂಪರೆಯ ಶೈಲಿಯ ಹವ್ಯಾಸಿ ಭಾಗವತೆ ದುರ್ಗಾಪರಮೇಶ್ವರಿ ಕುಕ್ಕಿಲ ಅವರು ಆಯ್ಕೆಯಾಗಿದ್ದಾರೆ.

ಸುಮಾರು 39 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ 55 ವರ್ಷದ ದುರ್ಗಾಪರಮೇಶ್ವರಿ ಕುಕ್ಕಿಲ ಅವರು ಪ್ರಸಿದ್ಧ ಭಾಗವತ ಮಾಂಬಾಡಿ ನಾರಾಯಣ ಭಾಗವತರ ಮೊಮ್ಮಗಳು. ಬಂಟ್ವಾಳ ತಾಲೂಕಿನ ಕೋಡಪದವು ನಿವಾಸಿ ಪ್ರಗತಿಪರ ಕೃಷಿಕ ಪುರಂದರವಿಠಲ ಕುಕ್ಕಿಲ ಅವರ ಪತ್ನಿಯಾಗಿದ್ದಾರೆ.

ಕಾಸರಗೋಡು ಜಿಲ್ಲೆಯ ಬಾಯಾರು ಗ್ರಾಮದ ಕೆರೆಮೂಲೆಯಲ್ಲಿ 1971ರ ಮೇ 30ರಂದು ಕೃಷ್ಣ ಭಟ್ಟ ಮತ್ತು ದ್ರೌಪದಿ ಅಮ್ಮ ದಂಪತಿಯ ಪುತ್ರಿಯಾಗಿ ಜನಿಸಿದ ದುರ್ಗಾಪರಮೇಶ್ವರಿ ಅವರಿಗೆ ಬಾಲ್ಯದಿಂದಲೇ ಯಕ್ಷಗಾನದ ನಂಟು ಬೆಳೆದಿತ್ತು. ಅವರ ಅಜ್ಜ ಮಾಂಬಾಡಿ ನಾರಾಯಣ ಭಾಗವತರು ಪ್ರಸಿದ್ಧ ಯಕ್ಷಗಾನ ಕಲಾವಿದರಾಗಿದ್ದು, ಸೋದರಮಾವ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರೂ ಯಕ್ಷಗಾನ ಹಿಮ್ಮೇಳದ ಗುರುಗಳಾಗಿದ್ದಾರೆ.

ಸಹೋದರರ ಪ್ರೇರಣೆಯಿಂದ ಬಾಲ್ಯದಲ್ಲೇ ಯಕ್ಷಗಾನ ಕಲಿತ ಅವರು, ಅಣ್ಣಂದಿರು ಅಜ್ಜ ಮಾಂಬಾಡಿ ನಾರಾಯಣ ಭಾಗವತರ ಬಳಿ ಹಿಮ್ಮೇಳ ಅಭ್ಯಾಸ ಮಾಡುತ್ತಿದ್ದುದರಿಂದ ಮನೆಯಲ್ಲಿ ಯಕ್ಷಗಾನ ಕಲಿಕೆಗೆ ಉತ್ತಮ ವಾತಾವರಣ ದೊರೆತಿತ್ತು. ಅಣ್ಣ ನಾರಾಯಣ ಭಟ್ ಅವರಿಂದ ಪೂರ್ವರಂಗದ ಪಾಠಗಳನ್ನು ಕಲಿತ ಅವರು 1987ರಲ್ಲಿ ಮೊದಲ ಬಾರಿಗೆ ಬಯಲಾಟದಲ್ಲಿ ಭಾಗವತಿಕೆ ಮಾಡಿದರು.

1993ರಿಂದ ಆಕಾಶವಾಣಿ ಕಲಾವಿದೆಯಾಗಿ ಗುರುತಿಸಿಕೊಂಡಿರುವ ದುರ್ಗಾಪರಮೇಶ್ವರಿ ಕುಕ್ಕಿಲ ಅವರು ಹಲವು ಸಂಘ-ಸಂಸ್ಥೆಗಳ ಯಕ್ಷಗಾನ ಕಾರ್ಯಕ್ರಮಗಳು, ಹವ್ಯಾಸಿ ಆಟಗಳು, ತಾಳಮದ್ದಳೆಗಳು ಹಾಗೂ ಮಹಿಳಾ ಮತ್ತು ಮಕ್ಕಳ ಯಕ್ಷಗಾನ ಕಾರ್ಯಕ್ರಮಗಳಲ್ಲಿ ಭಾಗವತರಾಗಿ ವೇದಿಕೆಯೇರಿದ್ದಾರೆ. ಅಲ್ಲದೆ, ಬೆಂಗಳೂರು ದೂರದರ್ಶನದಲ್ಲಿಯೂ ಯಕ್ಷಗಾನ ಪ್ರದರ್ಶನ ನೀಡಿದ್ದಾರೆ.

ಯಕ್ಷಗಾನ ಕ್ಷೇತ್ರದಲ್ಲಿ ಹಲವು ವರ್ಷಗಳ ಕಾಲ ಸಲ್ಲಿಸಿರುವ ಸೇವೆ ಹಾಗೂ ಪರಂಪರೆಯ ಶೈಲಿಯ ಭಾಗವತಿಕೆಯ ಸಾಧನೆಗೆ ಯಕ್ಷಸಿರಿ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ ಎಂದು ದುರ್ಗಾಪರಮೇಶ್ವರಿ ಕುಕ್ಕಿಲ ಅವರು ತಿಳಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…

28 mins ago

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…

31 mins ago

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…

33 mins ago

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…

36 mins ago

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…

37 mins ago

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…

39 mins ago