ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ‘ಆಟಿಡೊಂಜಿ ವಿಪ್ರಕೂಟ’ ಸಾಂಸ್ಕೃತಿಕ ಹಬ್ಬವು ಆ.15ರಂದು ಕನ್ನರ್ಪಾಡಿ ಶ್ರೀದೇವಿ ಸಭಾಭವನದಲ್ಲಿ ನಡೆಯಲಿದೆ ಎಂದು ಮಹಾಸಭಾ ತಾಲೂಕು ಅಧ್ಯಕ್ಷ ಶ್ರೀಕಾಂತ್ ಉಪಾಧ್ಯ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ ನೆರವೇರಲಿದ್ದು, ಬಳಿಕ 9.15ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದ ವೇಳೆ ದೇಶದ ರಕ್ಷಣೆಗಾಗಿ ಸೇವೆ ಸಲ್ಲಿಸುತ್ತಿರುವ ಭಾರತೀಯ ಯೋಧರನ್ನು ಗೌರವಿಸಿ ಸನ್ಮಾನಿಸಲಾಗುವುದು ಎಂದು ಅವರು ತಿಳಿಸಿದರು.
ಸಾಂಸ್ಕೃತಿಕ ಹಬ್ಬದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಸಮಾಜದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಹಾಸಭಾ ಮನವಿ ಮಾಡಿದೆ.
ಸುದ್ದಿಗೋಷ್ಠಿಯಲ್ಲಿ ಬ್ರಾಹ್ಮಣ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಕೆ. ದುರ್ಗಾಪ್ರಸಾದ್ ಭಾರ್ಗವ್, ಕೋಶಾಧಿಕಾರಿ ಹಯವದನ ಭಟ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



