ಬಹಾದ್ದೂರ್ ಗ್ರೂಪ್ ಆಫ್ ಕಂಪೆನಿ ಹಾಗೂ ಬಹಾದ್ದೂರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಅಧೀನದ ಅಲ್ ಬಿರ್ರ್ ಶಾಲೆಗೆ ಟಾಟಾ ಮ್ಯಾಜಿಕ್ ಮಿನಿ ವ್ಯಾನ್ ಹಾಗೂ ಸಾರ್ವಜನಿಕ ಸೇವೆಗಾಗಿ ಅಂಬುಲೆನ್ಸ್ ಕೊಡುಗೆಯಾಗಿ ನೀಡಲಾಗಿದೆ.
ಕಲ್ಲಡ್ಕ ಮಸೀದಿ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎರಡೂ ವಾಹನಗಳನ್ನು ಲೋಕಾರ್ಪಣೆಗೊಳಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಖತೀಬ್ ಸಯ್ಯಿದ್ ಅಲಿ ಮನ್ನಾನಿ, ದಾನ-ಧರ್ಮವು ಮಾನವನ ಸಂಕಷ್ಟಗಳಿಗೆ ಪರಿಹಾರವಾಗಿದ್ದು, ಪ್ರತಿಯೊಬ್ಬರೂ ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಸಮಾಜ ಸೇವೆ ಮಾಡುವ ಮೂಲಕ ಜೀವನವನ್ನು ಪಾವನಗೊಳಿಸಬೇಕು ಎಂದು ಕರೆ ನೀಡಿದರು.
ಮಸೀದಿ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪನಾಮಾ ಮಾತನಾಡಿ, ಪ್ರಸಕ್ತ ವರ್ಷ ಅಲ್ ಬಿರ್ರ್ ಶಾಲೆ ಆರಂಭವಾಗಿದ್ದು, ಶಾಲಾ ವಾಹನದ ಅಗತ್ಯತೆ ಕುರಿತು ಝೈನುಲ್ ಆಬಿದ್ ಅವರನ್ನು ಸಂಪರ್ಕಿಸಿದಾಗ ತಕ್ಷಣ ಸ್ಪಂದಿಸಿದ್ದಾರೆ. ಅಲ್ಲದೆ, ಜಾತಿ-ಧರ್ಮದ ಭೇದವಿಲ್ಲದೆ ಕಲ್ಲಡ್ಕದ ಎಲ್ಲಾ ನಾಗರಿಕರ ತುರ್ತು ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಅಂಬುಲೆನ್ಸ್‌ನ್ನೂ ಕೊಡುಗೆಯಾಗಿ ನೀಡಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಸೀದಿ ಉಪಾಧ್ಯಕ್ಷ ಅಬೂಬಕ್ಕರ್ ಮುರಬೈಲ್, ಕೋಶಾಧಿಕಾರಿ ಜವಾಝ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…