ಸೂರಿಕುಮೇರು ಸಮೀಪದ ದಾಸಕೋಡಿ ಕ್ರಾಸಿಂಗ್ ಬಳಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸೂರಿಕುಮೇರು ನಿವಾಸಿ ಮನೋಜ್ ಗಾಯಗೊಂಡ ಬೈಕ್ ಸವಾರ ಎಂದು ತಿಳಿದುಬಂದಿದೆ. ಕಲ್ಲಡ್ಕ ಕಡೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಮಾಣಿ ಕಡೆಯಿಂದ ಬರುತ್ತಿದ್ದ ಕಾರು ಪೆಟ್ರೋಲ್ ಪಂಪ್‌ಗೆ ಇಂಧನ ತುಂಬಿಸಲು ತಿರುಗುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಬೈಕ್ ಸವಾರನ ಜೊತೆಗೆ ಕಾರು ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳಾ ಪ್ರಯಾಣಿಕರಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…