ಅಮ್ಮಾ ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ‘ಕನಸ ಯುವರಾಣಿ’ ತುಳು ಹಾಗೂ ಕನ್ನಡ ಮ್ಯೂಸಿಕಲ್ ವಿಡಿಯೋ ಸಾಂಗ್ ಆಗಸ್ಟ್ 19ರಂದು ಮಂಗಳೂರಿನ ಭಾರತ್ ಸಿನಿಮಾಸ್‌ನಲ್ಲಿ ಬಿಡುಗಡೆಯಾಗಲಿದೆ.
ಅಕ್ಷಯ್ ವಾಮಂಜೂರು ಹಾಗೂ ಧನ್ಯಾ ಚಿನ್ನು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಹಾಡಿಗೆ ಅಕ್ಷಯ್ ವಾಮಂಜೂರು ಕಥೆ ಮತ್ತು ಚಿತ್ರಕಥೆ ಬರೆದಿದ್ದು, ಪ್ರಥಮ್ ಸಾಲಿಯಾನ್ ನಿರ್ದೇಶನ ಮಾಡಿದ್ದಾರೆ.
ಸಂಗೀತ ನಿರ್ಮಾಪಕ ಹಾಗೂ ಗಾಯಕರಾಗಿ ನಿಶ್ಚಿತ್ ರಾಜ್, ಸಾಹಿತ್ಯ ಮತ್ತು ಕಲಾ ವಿಭಾಗದಲ್ಲಿ ರತೀಶ್ ರತ್ನಮಾಲ, ಛಾಯಾಗ್ರಹಣವನ್ನು ಸನತ್ ಶೆಟ್ಟಿ ಹಾಗೂ ಸಂಕಲನವನ್ನು ಯಶ್ವಿನ್ ಕೆ. ಶೆಟ್ಟಿಗಾರ್ ನಿರ್ವಹಿಸಿದ್ದಾರೆ.
ಈಗಾಗಲೇ ‘ಕನಸ ಯುವರಾಣಿ’ಯ ಟೀಸರ್ ಅಮ್ಮಾ ಕ್ರಿಯೇಷನ್ ಮಂಗಳೂರು ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿ ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.
ವಿಭಿನ್ನ ಕಲಾವಿದರ ಬಳಗದೊಂದಿಗೆ ಮೂಡಿಬಂದಿರುವ ಈ ಮ್ಯೂಸಿಕಲ್ ವಿಡಿಯೋ ಸಾಂಗ್ ಆಗಸ್ಟ್ 19ರಂದು ಪ್ರೇಕ್ಷಕರ ಮುಂದೆ ಬರಲಿದ್ದು, ಹೊಸ ಪ್ರಯತ್ನಕ್ಕೆ ಪ್ರೇಕ್ಷಕರ ಪ್ರತಿಕ್ರಿಯೆ ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…