ಮನೆಯಲ್ಲಿ ಒಬ್ಬರೇ ಇದ್ದ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು ₹5 ಲಕ್ಷ ಮೌಲ್ಯದ ಚಿನ್ನದ ಬಳೆಗಳನ್ನು ಅಪರಿಚಿತ ವ್ಯಕ್ತಿಯೊಬ್ಬ ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿರುವ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಗ್ರಾಮದ ಉದ್ದದ ಗುಡ್ಡೆಯಲ್ಲಿ ನಡೆದಿದೆ.
ಉದ್ದದ ಗುಡ್ಡೆ ನಿವಾಸಿ ಅವ್ವಮ್ಮ ಅವರು ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಮನೆಯೊಳಗೆ ಪ್ರವೇಶಿಸಿದ್ದಾನೆ. ಬಳಿಕ ಅವರ ಎರಡೂ ಕೈಗಳಲ್ಲಿದ್ದ ಸುಮಾರು 40 ಗ್ರಾಂ ತೂಕದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದಾನೆ.
ಬಳೆಗಳನ್ನು ಎಳೆಯುವ ಸಂದರ್ಭದಲ್ಲಿ ವೃದ್ಧೆಯ ಎಡಕೈಗೆ ರಕ್ತಗಾಯವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಅವ್ವಮ್ಮ ಅವರ ಪುತ್ರ ಸಾದಿಕ್ ನೀಡಿದ ದೂರಿನ ಆಧಾರದ ಮೇಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ 2023ರ ಕಲಂ 309ರ ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…