ಕರಾವಳಿ

ಉಡುಪಿ: ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ನಿಧನ…!

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅವರಿಗೆ 75 ವರ್ಷ ವಯಸ್ಸಾಗಿತ್ತು. ಪರ್ಕಳ, ಉಡುಪಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿದ್ದ ಶುಭಕಾರ್ಯಗಳು, ದೇವಸ್ಥಾನ ಹಾಗೂ ದೈವಸ್ಥಾನಗಳ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ನಾಗಸ್ವರ ವಾದನದ ಮೂಲಕ ಸುಂದರ ಶೇರಿಗಾರ್ ಅವರು ಸೇವೆ ಸಲ್ಲಿಸುತ್ತಿದ್ದರು.

ನಾಗಸ್ವರ ವಾದನದ ಜೊತೆಗೆ ಉತ್ತಮ ಸ್ಯಾಕ್ಸೊಫೋನ್ ವಾದಕರಾಗಿಯೂ ಅವರು ಗುರುತಿಸಿಕೊಂಡಿದ್ದರು. ಸಂಗೀತ ಕ್ಷೇತ್ರದಲ್ಲಿ ಅಪಾರ ಶಿಷ್ಯವೃಂದವನ್ನು ಹೊಂದಿದ್ದ ಅವರು, ತಮ್ಮ ಕಲಾ ಸೇವೆಯ ಮೂಲಕ ಜನಮನ್ನಣೆ ಗಳಿಸಿದ್ದರು.

ಸುಂದರ ಶೇರಿಗಾರ್ ಅವರ ನಿಧನದಿಂದ ಕರಾವಳಿಯ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.

ಮೃತರು ನಾಲ್ಕು ಹೆಣ್ಣು ಮಕ್ಕಳು ಹಾಗೂ ಓರ್ವ ಗಂಡು ಮಗನನ್ನು ಅಗಲಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಮನೆಯಲ್ಲಿ ಒಂಟಿಯಾಗಿದ್ದ 82 ವರ್ಷದ ವೃದ್ಧೆಯ ಚಿನ್ನದ ಬಳೆ ದೋಚಿ ಪರಾರಿ..!

ಮನೆಯಲ್ಲಿ ಒಬ್ಬರೇ ಇದ್ದ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು ₹5 ಲಕ್ಷ ಮೌಲ್ಯದ ಚಿನ್ನದ ಬಳೆಗಳನ್ನು ಅಪರಿಚಿತ ವ್ಯಕ್ತಿಯೊಬ್ಬ…

1 day ago

ಮಂಗಳೂರು: ಆಗಸ್ಟ್ 19ರಂದು ‘ಕನಸ ಯುವರಾಣಿ’ ಮ್ಯೂಸಿಕಲ್ ವಿಡಿಯೋ ಸಾಂಗ್ ಬಿಡುಗಡೆ

ಅಮ್ಮಾ ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ‘ಕನಸ ಯುವರಾಣಿ’ ತುಳು ಹಾಗೂ ಕನ್ನಡ ಮ್ಯೂಸಿಕಲ್ ವಿಡಿಯೋ ಸಾಂಗ್ ಆಗಸ್ಟ್ 19ರಂದು…

1 day ago

ಮಂಗಳೂರು: ಮಂಗಳೂರಿನ ಕೆಎಫ್‌ಸಿಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಹಳೆಯ ಮಾಂಸ, ಅವಧಿ ಮೀರಿದ ಎಣ್ಣೆ ಪತ್ತೆ

ನಗರದ ಕೆ.ಎಸ್. ರಾವ್ ರಸ್ತೆಯ ಮಾಲ್‌ವೊಂದರಲ್ಲಿರುವ ಕೆಎಫ್‌ಸಿಯಲ್ಲಿ ಕಲುಷಿತ ಆಹಾರ ಪೂರೈಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ…

1 day ago

ಬಂಟ್ವಾಳ: ಹಾಸನ-ಮಂಗಳೂರು ಮಾರ್ಗದಲ್ಲಿ ಮಾದಕವಸ್ತು ಸಾಗಾಟ; ಓರ್ವ ಬಂಧನ

ಹಾಸನದಿಂದ ಮಂಗಳೂರು ಮಾರ್ಗವಾಗಿ ಅಕ್ರಮವಾಗಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಜಾಲವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇದಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯ…

1 day ago

ಸೂರಿಕುಮೇರು: ಕಾರು-ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಗಂಭೀರ…!

ಸೂರಿಕುಮೇರು ಸಮೀಪದ ದಾಸಕೋಡಿ ಕ್ರಾಸಿಂಗ್ ಬಳಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗಂಭೀರವಾಗಿ…

1 day ago

ಬಂಟ್ವಾಳ: ಕನಪಾದೆ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ…!

ಪೂಜ್ಯಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಬಂಟ್ವಾಳ ತಾಲೂಕು…

4 days ago