ಜನನಿಬಿಡ ನ್ಯೂ ಮಾರ್ಕೆಟ್ ಪ್ರದೇಶದ ಫ್ರೀ ಸ್ಕೂಲ್ ಸ್ಟ್ರೀಟ್ ಬಳಿಯ ಹೋಟೆಲ್‌ನಲ್ಲಿ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮಗು ಸೇರಿದಂತೆ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ.
ಬೆಂಕಿ ಕಾಣಿಸಿಕೊಂಡ ಬಳಿಕ ಹೋಟೆಲ್‌ನ್ನು ದಟ್ಟ ಹೊಗೆ ಆವರಿಸಿಕೊಂಡಿದ್ದು, ಅಗ್ನಿಶಾಮಕ ದಳ ಹಾಗೂ ವಿಪತ್ತು ನಿರ್ವಹಣಾ ತಂಡಗಳು ಕಾರ್ಯಾಚರಣೆ ನಡೆಸಿ ಸುಮಾರು 80 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಿವೆ.
ಮೃತರಲ್ಲಿ ಚಿಕಿತ್ಸೆಗಾಗಿ ಭಾರತಕ್ಕೆ ಆಗಮಿಸಿದ್ದ ಬಾಂಗ್ಲಾದೇಶದ ಪ್ರಜೆಗಳು ಹಾಗೂ ಜಾರ್ಖಂಡ್ ಮೂಲದ ವ್ಯಕ್ತಿಯೊಬ್ಬರು ಸೇರಿದ್ದಾರೆ. ಘಟನಾ ಸ್ಥಳದಲ್ಲಿ ಅಗತ್ಯ ಅಗ್ನಿ ಸುರಕ್ಷತಾ ಕ್ರಮಗಳ ಕೊರತೆ ಕಂಡುಬಂದಿದೆ ಎನ್ನಲಾಗಿದ್ದು, ಏರ್‌ಕಂಡೀಷನರ್‌ನಲ್ಲಿ ಉಂಟಾದ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಘಟನೆ ಬಳಿಕ ಹೋಟೆಲ್ ಮಾಲೀಕ ಹಾಗೂ ಕೆಲ ಸಿಬ್ಬಂದಿ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಗ್ನಿ ಅವಘಡದ ನಿಖರ ಕಾರಣ ಹಾಗೂ ಸುರಕ್ಷತಾ ಲೋಪಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…
ಪ್ರಧಾನಿ ನರೇಂದ್ರ ಮೋದಿಯವರ 25ನೇ ವರ್ಷದ ಆಡಳಿತದ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ‘ಸೇವಾ ಮೇರಾ ಯೋಗದಾನ್’ ಸೇವಾ ಕಾರ್ಯಕ್ರಮದ ಪ್ರಯುಕ್ತ…
ಅಂಬೇಡ್ಕರ್ ಯುವಸೇನೆ ಉಡುಪಿ ಜಿಲ್ಲೆ ಆಶ್ರಯದಲ್ಲಿ ಸಹಭಾಗಿ ಸಂಘಟನೆಗಳ ಸಹಯೋಗದೊಂದಿಗೆ ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ ‘ಮಹಿಷ ಮಹೋತ್ಸವ’ವನ್ನು ಅ.11ರಂದು…
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಅ.10ರಂದು ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ…
ನಗರದ ಎ.ಜೆ. ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗ ಹಾಗೂ ತರಬೇತಿ ಮತ್ತು ಉದ್ಯೋಗ ವಿಭಾಗದ ಸಹಯೋಗದಲ್ಲಿ…
ಅರ್ಹ ಹಾಗೂ ಮಾನ್ಯಗೊಂಡ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ ಅಳಿಸುವ ಉದ್ದೇಶದಿಂದ ಸುಳ್ಳು ಹಾಗೂ ಆಧಾರರಹಿತ ಫಾರಂ ನಂ.7…