ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರ ನಾರಾಯಣ ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಆಗಸ್ಟ್ 9ರಂದು ಮಂಗಳೂರು ದಕ್ಕೆಯಿಂದ ‘ಓಷನ್ ಸ್ಟಾರ್’ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ವೇಳೆ ಭಾರಿ ಅಲೆ ಅಪ್ಪಳಿಸಿದ ಪರಿಣಾಮ ನಾರಾಯಣ ಅವರು ಸಮುದ್ರಕ್ಕೆ ಕೊಚ್ಚಿಹೋಗಿದ್ದರು.
ಘಟನೆಯ ಬಳಿಕ ಬೋಟ್ ಮಾಲೀಕರು ಹಾಗೂ ಕುಟುಂಬಸ್ಥರು ಕಳೆದ ಎಂಟು ದಿನಗಳಿಂದ ನಾರಾಯಣ ಅವರಿಗಾಗಿ ತೀವ್ರ ಶೋಧ ನಡೆಸುತ್ತಿದ್ದರು. ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವೂ ದಾಖಲಾಗಿತ್ತು.
ಇದೀಗ ಕೋಟೆಪುರ ಅಲಿವೆಬಾಗಿಲು ಬಳಿ ನಾರಾಯಣ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹದ ಮಹಜರು ಸೇರಿದಂತೆ ಕಾನೂನು ಪ್ರಕ್ರಿಯೆಗಳನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…
ಪ್ರಧಾನಿ ನರೇಂದ್ರ ಮೋದಿಯವರ 25ನೇ ವರ್ಷದ ಆಡಳಿತದ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ‘ಸೇವಾ ಮೇರಾ ಯೋಗದಾನ್’ ಸೇವಾ ಕಾರ್ಯಕ್ರಮದ ಪ್ರಯುಕ್ತ…
ಅಂಬೇಡ್ಕರ್ ಯುವಸೇನೆ ಉಡುಪಿ ಜಿಲ್ಲೆ ಆಶ್ರಯದಲ್ಲಿ ಸಹಭಾಗಿ ಸಂಘಟನೆಗಳ ಸಹಯೋಗದೊಂದಿಗೆ ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ ‘ಮಹಿಷ ಮಹೋತ್ಸವ’ವನ್ನು ಅ.11ರಂದು…
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಅ.10ರಂದು ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ…
ನಗರದ ಎ.ಜೆ. ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗ ಹಾಗೂ ತರಬೇತಿ ಮತ್ತು ಉದ್ಯೋಗ ವಿಭಾಗದ ಸಹಯೋಗದಲ್ಲಿ…
ಅರ್ಹ ಹಾಗೂ ಮಾನ್ಯಗೊಂಡ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ ಅಳಿಸುವ ಉದ್ದೇಶದಿಂದ ಸುಳ್ಳು ಹಾಗೂ ಆಧಾರರಹಿತ ಫಾರಂ ನಂ.7…