ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದಡಿ ವಿಟ್ಲ ಕೊಂಡಗಾಯಿ ನಿವಾಸಿ ಉಮೇಶ್ (53) ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಆಗಸ್ಟ್ 15ರಂದು ಅಳಿಕೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬಸ್‌ನಲ್ಲಿ ಬಾಲಕನ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಕುಳಿತಿದ್ದ ಎನ್ನಲಾಗಿದೆ. ಪ್ರಯಾಣದ ವೇಳೆ ಬಾಲಕನೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪಿಯು, ಬಳಿಕ ಬಾಲಕ ಮನೆಗೆ ತೆರಳಿದ ಸಂದರ್ಭ ಅಲ್ಲಿಗೂ ತೆರಳಿ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…
ಪ್ರಧಾನಿ ನರೇಂದ್ರ ಮೋದಿಯವರ 25ನೇ ವರ್ಷದ ಆಡಳಿತದ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ‘ಸೇವಾ ಮೇರಾ ಯೋಗದಾನ್’ ಸೇವಾ ಕಾರ್ಯಕ್ರಮದ ಪ್ರಯುಕ್ತ…
ಅಂಬೇಡ್ಕರ್ ಯುವಸೇನೆ ಉಡುಪಿ ಜಿಲ್ಲೆ ಆಶ್ರಯದಲ್ಲಿ ಸಹಭಾಗಿ ಸಂಘಟನೆಗಳ ಸಹಯೋಗದೊಂದಿಗೆ ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ ‘ಮಹಿಷ ಮಹೋತ್ಸವ’ವನ್ನು ಅ.11ರಂದು…
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಅ.10ರಂದು ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ…
ನಗರದ ಎ.ಜೆ. ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗ ಹಾಗೂ ತರಬೇತಿ ಮತ್ತು ಉದ್ಯೋಗ ವಿಭಾಗದ ಸಹಯೋಗದಲ್ಲಿ…
ಅರ್ಹ ಹಾಗೂ ಮಾನ್ಯಗೊಂಡ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ ಅಳಿಸುವ ಉದ್ದೇಶದಿಂದ ಸುಳ್ಳು ಹಾಗೂ ಆಧಾರರಹಿತ ಫಾರಂ ನಂ.7…