ಜನ ಮನದ ನಾಡಿ ಮಿಡಿತ

Advertisement

ಮೈಸೂರು: ದೇವಸ್ಥಾನ ಕಳ್ಳತನಕ್ಕೆ ಯತ್ನ; ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಖದೀಮರು…!

ತಡರಾತ್ರಿ ದೇವಸ್ಥಾನವೊಂದರಲ್ಲಿ ಕಳ್ಳತನ ಮಾಡಿ, ಮತ್ತೊಂದು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ವೇಳೆ ಖದೀಮರು ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಘಟನೆ ಹನಗೋಡು ಹೋಬಳಿಯ ನೇರಳಕುಪ್ಪೆ ಗ್ರಾಮದಲ್ಲಿ ನಡೆದಿದೆ.

ಹೆಬ್ಬಾಳ ಗ್ರಾಮದ ಶ್ರೀ ಓಂಕಾರೇಶ್ವರ ದೇವಸ್ಥಾನದ ಬೀಗ ಒಡೆದು ವಿಗ್ರಹ, ದೀಪದ ಕಂಬಗಳು, ಗಂಟೆಗಳು, ಹುಂಡಿ ಹಾಗೂ ಬೆಲೆಬಾಳುವ ಪೂಜಾ ಸಾಮಗ್ರಿಗಳನ್ನು ಕಳ್ಳತನ ಮಾಡಲಾಗಿದೆ.

ಬಳಿಕ ನೇರಳಕುಪ್ಪೆ ಗ್ರಾಮದ ಮಹಾಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಕಳ್ಳತನ ಮಾಡಲು ಆರೋಪಿಗಳು ಕಾರಿನಲ್ಲಿ ಎರಡು-ಮೂರು ಬಾರಿ ಸುತ್ತಾಡುತ್ತಿದ್ದರು. ಅನುಮಾನಗೊಂಡ ಗ್ರಾಮಸ್ಥರೊಬ್ಬರು ಸ್ನೇಹಿತರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ತೆರಳಿ ನೋಡಿದಾಗ ಆರೋಪಿಗಳು ದೇವಸ್ಥಾನದ ಬೀಗ ಒಡೆಯುತ್ತಿರುವುದು ಕಂಡುಬಂದಿದೆ.

ಗ್ರಾಮಸ್ಥರನ್ನು ಕಂಡು ಆರೋಪಿಗಳು ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದಾಗ, ಟ್ರ್ಯಾಕ್ಟರ್ ಅಡ್ಡಗಟ್ಟಿ ಕಾರನ್ನು ತಡೆದು ಇಬ್ಬರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಳ್ಳತನದಲ್ಲಿ ಒಟ್ಟು ನಾಲ್ವರು ಭಾಗಿಯಾಗಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಸಿಕ್ಕಿಬಿದ್ದ ಇಬ್ಬರು ಮೈಸೂರಿನವರು ಎನ್ನಲಾಗಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

ಮಂಗಳೂರು: ಮಂಗಳೂರಿನ ಎ.ಜೆ. ತಾಂತ್ರಿಕ ಕಾಲೇಜಿನಲ್ಲಿ ಅ.8, 9ರಂದು ರಾಷ್ಟ್ರೀಯ ಮಟ್ಟದ ಹ್ಯಾಕಥಾನ್; ₹1 ಲಕ್ಷ ಬಹುಮಾನ

ಬಂಟ್ವಾಳ: ಫಾರಂ ನಂ.7 ದುರುಪಯೋಗ ಆರೋಪ; ಕ್ರಮಕ್ಕೆ ಒತ್ತಾಯಿಸಿ ತಹಶೀಲ್ದಾರ್‌ಗೆ ರಮಾನಾಥ ರೈ ಮನವಿ

ಬಂಟ್ವಾಳ: ಆನೆದೋಡಿಯಲ್ಲಿ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ

ಬಂಟ್ವಾಳ: ತಲಪಾಡಿಯಲ್ಲಿ ಲಾರಿ–ಬಸ್–ಕಾರ್ ನಡುವೆ ಸರಣಿ ಅಪಘಾತ; ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯ..!

ಬೆಂಗಳೂರು: ಏಷ್ಯನ್ ಗೇಮ್ಸ್ ಪದಕ ವಿಜೇತೆ ಎಂ.ಆರ್. ಪೂವಮ್ಮಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸನ್ಮಾನ

error: Content is protected !!