ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪಕ್ಕೆ ಸಂಬಂಧಿಸಿದಂತೆ ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಮಹೇಂದ್ರ ಕುಮಾರ್ ಶೆಟ್ಟಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಗ್ರಹಿಸಿದೆ.
ಈ ಸಂಬಂಧ ಸಂಘದ ನಿಯೋಗವು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಸೇರಿದಂತೆ ವಿವಿಧ ಚಿಕಿತ್ಸೆಗಳ ಸಂದರ್ಭದಲ್ಲಿ ಬಡ ಹಾಗೂ ಸಾಮಾನ್ಯ ರೋಗಿಗಳಿಂದ ಹಣ ಪಡೆಯಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಶ್ರೀಕಾಂತ್ ಹೆಮ್ಮಾಡಿ ವರದಿ ಪ್ರಕಟಿಸಿದ್ದರು. ಈ ವರದಿಯಿಂದ ಅಸಮಾಧಾನಗೊಂಡಿದ್ದ ಡಾ. ಮಹೇಂದ್ರ ಕುಮಾರ್ ಶೆಟ್ಟಿ, ಆಗಸ್ಟ್ 21ರಂದು ಕುಂದಾಪುರದ ಹೊಟೇಲೊಂದರಲ್ಲಿ ಉಪಹಾರ ಸೇವಿಸುತ್ತಿದ್ದ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪತ್ರಕರ್ತರ ಸಂಘ ಒತ್ತಾಯಿಸಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…