ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದ ತೋಟದ ಮನೆಯಲ್ಲಿ ದಾರುಣ ಘಟನೆ ನಡೆದಿದೆ.

ತೋಟದ ಮನೆಯ ಸಮೀಪದ ತೆರೆದ ಬಾವಿಗೆ ಕಾಲು ಜಾರಿ ಇಬ್ಬರು ಮಕ್ಕಳು ಬಿದ್ದಿದ್ದಾರೆ ಎನ್ನಲಾಗಿದೆ. 9ನೇ ತರಗತಿ ವಿದ್ಯಾರ್ಥಿನಿ ಸಾಕ್ಷಿ ಹಾಗೂ ರಕ್ಷಿತಾ ಬಾವಿಗೆ ಬಿದ್ದ ಮಕ್ಕಳು. ನಿನ್ನೆ ತಡರಾತ್ರಿ ಮಕ್ಕಳ ಮೃತದೇಹ ಪತ್ತೆಯಾಗಿದೆ. ಮಕ್ಕಳನ್ನು ರಕ್ಷಿಸಲು ತಂದೆ ಸಾಬಣ್ಣ ಕೂಡ ಬಾವಿಗೆ ಜಿಗಿದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಸಾಬಣ್ಣ ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



