ಮುಂಬರುವ ಹಬ್ಬ-ಹರಿದಿನಗಳ ಹಿನ್ನೆಲೆಯಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಡಬ ಪೇಟೆಯಲ್ಲಿ ಪೊಲೀಸ್ ಇಲಾಖೆ ಹಾಗೂ ಆಂಟಿ ಕಮ್ಯೂನಲ್ ಫೋರ್ಸ್ ವತಿಯಿಂದ ಪಥಸಂಚಲನ ನಡೆಸಲಾಯಿತು.
ಕಡಬದ ಅನುಗ್ರಹ ಹಾಲ್ ಸಮೀಪದಿಂದ ಆರಂಭಗೊಂಡ ಪಥಸಂಚಲನವು ಮುಖ್ಯ ರಸ್ತೆಯ ಮೂಲಕ ಕಡಬ ಪೇಟೆಯಲ್ಲಿ ಸಾಗಿತು. ಪೊಲೀಸ್ ಹಾಗೂ ಸಶಸ್ತ್ರ ಪಡೆಗಳ ಸಿಬ್ಬಂದಿ ಶಿಸ್ತುಬದ್ಧವಾಗಿ ಪಥಸಂಚಲನ ನಡೆಸಿದರು.
ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು, ಕೋಮು ಪ್ರಚೋದನೆ ಅಥವಾ ಕಾನೂನು ಉಲ್ಲಂಘನೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆ ವಹಿಸುವ ಸಂದೇಶವನ್ನು ಪಥಸಂಚಲನದ ಮೂಲಕ ನೀಡಲಾಯಿತು.
ಪಥಸಂಚಲನವು ಸಾರ್ವಜನಿಕರಲ್ಲಿ ಸುರಕ್ಷತೆಯ ಭಾವನೆ ಮೂಡಿಸುವಂತಿತ್ತು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…