ಶ್ರೀಕೃಷ್ಣನ ಸನ್ನಿಧಿಯಲ್ಲಿ ಸತತ 25 ಗಂಟೆಗಳ ಕಾಲ ದಾಸರ ಕೀರ್ತನೆಗಳನ್ನು ನಿರಂತರವಾಗಿ ಹಾಡುವ ಮೂಲಕ ಸಂಗೀತ ವಿದುಷಿ ಸಂಗೀತ ಬಾಲಚಂದ್ರ ಅವರು ವಿಶ್ವದಾಖಲೆ ನಿರ್ಮಿಸಿದ್ದಾರೆ.
ಶ್ರೀಪುತ್ತಿಗೆ ಮಠದ ಭಗವದ್ಗೀತಾ ಮಂದಿರದ ನೃಸಿಂಹ ಸಭಾಭವನದಲ್ಲಿ ಭಾನುವಾರ ಬೆಳಗ್ಗೆ 6.30ಕ್ಕೆ ಆರಂಭವಾದ ನಿರಂತರ ಗಾಯನ, ಸೋಮವಾರ ಬೆಳಗ್ಗೆ 7.40ರ ಸುಮಾರಿಗೆ ‘ಕೃಷ್ಣ ಏನ ಬಾರದೆ’ ದಾಸರ ಪದದೊಂದಿಗೆ ಮುಕ್ತಾಯಗೊಂಡಿತು.
ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನ ಏಷ್ಯಾ ಮುಖ್ಯಸ್ಥ ಡಾ. ಮನೀಷ್ ವಿಶ್ನೋಯಿ ಅವರು ಸಂಗೀತ ಬಾಲಚಂದ್ರ ಅವರ ಸಾಧನೆಯನ್ನು ಅಧಿಕೃತವಾಗಿ ಘೋಷಿಸಿ ಪ್ರಮಾಣಪತ್ರವನ್ನು ಪ್ರದಾನ ಮಾಡಿದರು.
ಬಳಿಕ ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹಾಗೂ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಸೂಚಿಸಿದ ‘ಗೀತಾ ಗಂಗೋತ್ರಿ’ ಬಿರುದನ್ನು ಸಂಗೀತ ಬಾಲಚಂದ್ರ ಅವರಿಗೆ ಪ್ರದಾನ ಮಾಡಲಾಯಿತು.
ಪಕ್ಕವಾದ್ಯ ಕಲಾವಿದರ ಸಹಕಾರದೊಂದಿಗೆ ನಡೆದ ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಸಂಗೀತ ಬಾಲಚಂದ್ರ ಹಾಗೂ ಅವರ ಮಾತಾ–ಪಿತರನ್ನು ಗೌರವಿಸಲಾಯಿತು. ಭೀಮಾ ಜುವೆಲರ್ಸ್ ಪ್ರಾಯೋಜಕತ್ವದ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯ ಸಂಗೀತಾಭಿಮಾನಿಗಳು ಹಾಗೂ ಕೃಷ್ಣಭಕ್ತರು ಸಾಕ್ಷಿಯಾದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…