ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ ಪುತ್ರನೊಬ್ಬ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಬ್ರಹ್ಮಾವರದ ಗಾಂಧಿನಗರದಲ್ಲಿ ನಡೆದಿದೆ.
ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಹಾಗೂ ಅವರ ಪತ್ನಿ ಶಂಶಾದ್ ಬೇಗಂ ಹತ್ಯೆಗೀಡಾದವರು. ಅವರ ಪುತ್ರ ಶಾಹಿದ್ ಅಲಿ ಕೊಲೆ ಆರೋಪಿಯಾಗಿದ್ದು, ಬ್ರಹ್ಮಾವರ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮೆಹಬೂಬ್ ಅಲಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಶಾಹಿದ್ ಅಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಭಾನುವಾರ ರಾತ್ರಿ ಕ್ಷುಲ್ಲಕ ವಿಚಾರಕ್ಕೆ ತಂದೆ-ತಾಯಿಯೊಂದಿಗೆ ಶಾಹಿದ್ ಜಗಳವಾಡಿದ್ದಾನೆ. ಈ ವೇಳೆ ಸುತ್ತಿಗೆಯಿಂದ ಇಬ್ಬರ ಮೇಲೂ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹತ್ಯೆಯ ಬಳಿಕ ಶಾಹಿದ್ ತಾನೇ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಹತ್ಯೆಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…