ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀಕೃಷ್ಣ ವೇಷ ಸ್ಪರ್ಧೆ: ಮಾಹಿತಿ ಪತ್ರ ಅನಾವರಣ…!

ಶ್ರೀ ಕ್ಷೇತ್ರ ಕದ್ರಿಯ ರಾಜಾಂಗಣದಲ್ಲಿ ಸೆಪ್ಟೆಂಬರ್ 4ರಂದು ರಾಷ್ಟ್ರೀಯ ಮಕ್ಕಳ ಉತ್ಸವದ ಅಂಗವಾಗಿ ಶ್ರೀಕೃಷ್ಣ ವೇಷ ಸ್ಪರ್ಧೆ ನಡೆಯಲಿದೆ.

ಶ್ರೀ ಕ್ಷೇತ್ರ ಕದ್ರಿ ದೇವಳದ ಸಹಯೋಗದೊಂದಿಗೆ ಕಲ್ಕೂರ ಪ್ರತಿಷ್ಠಾನವು ಈ ಸ್ಪರ್ಧೆಯನ್ನು ಆಯೋಜಿಸಿದ್ದು, ಸ್ಪರ್ಧೆಯ ವಿವರಗಳನ್ನೊಳಗೊಂಡ ಮಾಹಿತಿ ಪತ್ರವನ್ನು ಇತ್ತೀಚೆಗೆ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಅನಾವರಣಗೊಳಿಸಲಾಯಿತು. ಪುಟಾಣಿಗಳಾದ ಶಿವಾವೃತ ಮತ್ತು ಪ್ರಜ್ಞಾ ಅವರ ಉಪಸ್ಥಿತಿಯಲ್ಲಿ ನಿವೃತ್ತ ಅಪರ ಜಿಲ್ಲಾಧಿಕಾರಿ ಡಾ. ಪ್ರಭಾಕರ ಶರ್ಮ ಅವರು ಮಾಹಿತಿ ಪತ್ರವನ್ನು ಅನಾವರಣಗೊಳಿಸಿದರು. ಸ್ಪರ್ಧೆಯು ಅರ್ಥಪೂರ್ಣವಾಗಿ ನಡೆಯಲಿ ಎಂದು ಅವರು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ್ ಕಲ್ಕೂರ, ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ರಾಷ್ಟ್ರೀಯ ಮಕ್ಕಳ ಉತ್ಸವದಲ್ಲಿ ಭಾಗವಹಿಸುವಂತೆ ಪೋಷಕರು ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.

ಯಾವುದೇ ಬೇಧಭಾವವಿಲ್ಲದೆ ಎಲ್ಲರೂ ಪಾಲ್ಗೊಳ್ಳಲಿರುವ ಈ ರಾಷ್ಟ್ರೀಯ ಮಕ್ಕಳ ಉತ್ಸವದ ಆಚರಣೆಗೆ ಅನುಕೂಲವಾಗುವಂತೆ ಉಭಯ ಜಿಲ್ಲೆಗಳ ಶಾಲಾ ಮಕ್ಕಳಿಗೆ ಆದ್ಯತೆಯ ನೆಲೆಯಲ್ಲಿ ಅಧಿಕೃತ ರಜೆ ಘೋಷಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿ, ಉರ್ವ ಸುರೇಂದ್ರ ರಾವ್, ಪಮ್ಮಿ ಕೊಡಿಯಾಲ್ ಬೈಲ್, ಚಂದ್ರಶೇಖರ್ ಶೆಟ್ಟಿ, ಕದ್ರಿ ನವನೀತ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ದಯಾನಂದ ಕಟೀಲ್ ವಂದಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!