ಗೋವಾದಿಂದ ಮಂಗಳೂರು ಮೂಲಕ ಕೇರಳಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಜಾಲವನ್ನು ಅಬಕಾರಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಅಬಕಾರಿ ಜಂಟಿ ಆಯುಕ್ತ ಬಾಲಕೃಷ್ಣ ಸಿ.ಎಚ್. ಅವರ ಸೂಚನೆ ಮೇರೆಗೆ ದಕ್ಷಿಣ ಕನ್ನಡ ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ಅವರ ನಿರ್ದೇಶನದಲ್ಲಿ ಅಬಕಾರಿ ವಿಶೇಷ ತಂಡವನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿತ್ತು.
ವಿಶೇಷ ತಂಡವು ಗೋವಾದಿಂದ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಗ್ಯಾಂಗ್ನ್ನು ಪತ್ತೆಹಚ್ಚಿದೆ. ಕಾರ್ಯಾಚರಣೆಯಲ್ಲಿ ಒಂದು ಸ್ವಿಫ್ಟ್ ಡಿಸೈರ್ ಕಾರು ಹಾಗೂ 438 ಲೀಟರ್ ಅಕ್ರಮ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.
ವಾಹನದ ಮಾಲೀಕ ಹಾಗೂ ಚಾಲಕರಾದ ಬಸವರಾಜು ಬೋವಿ ಮತ್ತು ನಾಗವೇಣಿ ನಾಯಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
ವಿಶೇಷ ಕಾರ್ಯಾಚರಣೆಯಲ್ಲಿ ಮಂಗಳೂರು ಉಪವಿಭಾಗದ ಉಪ ಅಧೀಕ್ಷಕಿ ಗಾಯತ್ರಿ ಸಿ.ಎಚ್., ಬಂಟ್ವಾಳ ಉಪವಿಭಾಗದ ಉಪ ಅಧೀಕ್ಷಕ ಸಂತೋಷ್ ಮೋಡಗಿ, ಬಂಟ್ವಾಳ ತಾಲೂಕು ವಲಯ ಅಬಕಾರಿ ನಿರೀಕ್ಷಕ ಲಕ್ಷ್ಮಣ್ ಶಿವಣಗಿ, ತಲಪಾಡಿ ಚೆಕ್ಪೋಸ್ಟ್ ನಿರೀಕ್ಷಕ ದತ್ತಗುರು ಅಥೆಣಿ, ಉಪನಿರೀಕ್ಷಕರಾದ ಜಯಪ್ಪ, ಶಿವಶಂಕರ್, ಅಭಿಷೇಕ್ ಹಾಗೂ ಪೇದೆ ಪ್ರಕಾಶ್ ಭಾಗವಹಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಂಟಿ ಆಯುಕ್ತರ ಕಚೇರಿಯ ನಿರೀಕ್ಷಕಿ ಸುನಿತ ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.



