ಮಲ್ಪೆ ಪಡುಕೆರೆ ದಕ್ಕೆಯಲ್ಲಿ ಬೋಟ್‌ನಲ್ಲಿ ನಡೆದ ಗಲಾಟೆ ವೇಳೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದ ಎಂಬಾತನನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸೋಮವಾರ ರಾತ್ರಿ ಬೋಟ್‌ನಲ್ಲಿ ಗೋವಿಂದ ಮತ್ತು ಅಭಿಷೇಕ್ ನಡುವೆ ಗಲಾಟೆ ನಡೆದಿತ್ತು. ಮಂಗಳವಾರ ಬೆಳಗಿನ ಜಾವ ಗೋವಿಂದ ಅಭಿಷೇಕ್‌ನನ್ನು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ತಿಳಿದ ತಕ್ಷಣ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನಿಲ್ ಕುಮಾರ್ ಡಿ. ಅವರು ಸಿಬ್ಬಂದಿ ಹೆಚ್‌ಸಿ ಆದರ್ಶ ಮತ್ತು ಪಿಸಿ ಕುಬೇರ ಅವರೊಂದಿಗೆ ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸಿದರು.
ಗೋವಿಂದ ಉಡುಪಿಗೆ ತೆರಳಿ ರೈಲು ನಿಲ್ದಾಣದ ಬಳಿ ಹೈದರಾಬಾದ್ ಅಥವಾ ಮುಂಬೈ ಕಡೆಗೆ ತೆರಳಲು ಮುಂದಾಗಿದ್ದ. ಈ ವೇಳೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ವಿಚಾರಣೆ ವೇಳೆ ಗೋವಿಂದ ಸುಮಾರು 15 ವರ್ಷಗಳಿಂದ ಮನೆಗೆ ತೆರಳದೆ ಮುಂಬೈ, ಹೈದರಾಬಾದ್ ಸೇರಿದಂತೆ ವಿವಿಧೆಡೆ ಕೆಲಸ ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ.
ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…