ವಕೀಲರು ಹಾಗೂ ನ್ಯಾಯಾಲಯಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಂಚೆ ಸೇವೆಗಳನ್ನು ಸುಲಭವಾಗಿ ಪಡೆಯುವ ಉದ್ದೇಶದಿಂದ ಬಂಟ್ವಾಳ ವಕೀಲರ ಸಂಘದ ಕಚೇರಿಯಲ್ಲಿ ಅಂಚೆ ಇಲಾಖೆಯ ‘ಸ್ವಯಂ ಬುಕ್ಕಿಂಗ್ ಕೌಂಟರ್’ ಆರಂಭಿಸಲಾಗಿದೆ.
ಬಂಟ್ವಾಳ ಹಿರಿಯ ಸಿವಿಲ್ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಪುತ್ತೂರು ವಿಭಾಗದ ಅಂಚೆ ಕಚೇರಿಗಳ ಅಧೀಕ್ಷಕ ರವೀಂದ್ರ ನಾಯ್ಕ ಎಂ. ಅವರು ಕೌಂಟರ್ ಉದ್ಘಾಟಿಸಿ ಮಾತನಾಡಿದರು.
ಪುತ್ತೂರು ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಎಂಟು ತಾಲೂಕುಗಳಿದ್ದು, ಸುಮಾರು 390 ಅಂಚೆ ಕಚೇರಿಗಳು ಹಾಗೂ 2,200ಕ್ಕೂ ಅಧಿಕ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಎಂಟು ತಾಲೂಕುಗಳ ಪೈಕಿ ಇಂತಹ ಹೊಸ ಮಾದರಿಯ ಸೇವೆಯನ್ನು ಮೊದಲ ಬಾರಿಗೆ ಬಂಟ್ವಾಳದಲ್ಲಿ ಆರಂಭಿಸಿರುವುದು ಹೆಮ್ಮೆಯ ವಿಚಾರವಾಗಿದೆ. ಬಂಟ್ವಾಳದಲ್ಲಿ ಆರಂಭಿಸಿರುವ ಈ ಸೇವೆ ಉಳಿದ ಏಳು ತಾಲೂಕುಗಳಲ್ಲಿಯೂ ಇಂತಹ ಸೌಲಭ್ಯಗಳನ್ನು ಕಲ್ಪಿಸಲು ಪ್ರೇರಣೆಯಾಗಲಿದೆ ಎಂದು ರವೀಂದ್ರ ನಾಯ್ಕ ಹೇಳಿದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…