ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಮಿತ್ತೂರು ಪರ್ಲೊಟ್ಟು ಸಮೀಪ ನಡೆದಿದೆ.

ಮೃತರನ್ನು ಮುರ ಶಾಂತಿನಗರ ನಿವಾಸಿ ಹರ್ಷದ್ ಎಂದು ಗುರುತಿಸಲಾಗಿದೆ. ಅಪಘಾತದ ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



