ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಐಟಿಐ ವಿದ್ಯಾರ್ಥಿ ಸಾವು

ಜ್ವರದಿಂದ ಬಳಲುತ್ತಿದ್ದ ಬಂಟ್ವಾಳದ ಐಟಿಐ ಕಾಲೇಜು ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಕಂಕನಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟ ಘಟನೆ ನಡೆದಿದೆ.

ಕೆಂಪುಗುಡ್ಡೆ ನಿವಾಸಿ ಆನಂದ ಅವರ ಪುತ್ರ ಹರ್ಷಿತ್ (ವಿದ್ಯಾರ್ಥಿ) ಮೃತಪಟ್ಟವರು. ಬಂಟ್ವಾಳದ ಐಟಿಐ ವೃತ್ತಿಪರ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹರ್ಷಿತ್ ಕಳೆದ ಐದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು.

ಆರಂಭದಲ್ಲಿ ಬಂಟ್ವಾಳದ ಸ್ಥಳೀಯ ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದರೂ ಜ್ವರ ಕಡಿಮೆಯಾಗಿರಲಿಲ್ಲ. ಬಳಿಕ ವಾಂತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತುಂಬೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಅಲ್ಲಿ ಒಂದು ದಿನ ಚಿಕಿತ್ಸೆ ಪಡೆದ ಬಳಿಕ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ ಹಿನ್ನೆಲೆಯಲ್ಲಿ ಹರ್ಷಿತ್ ಅವರನ್ನು ಮಂಗಳೂರಿನ ಕಂಕನಾಡಿಯ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಕಂಕನಾಡಿ ಆಸ್ಪತ್ರೆಯಲ್ಲಿ ಎರಡು ದಿನಗಳ ಕಾಲ ಚಿಕಿತ್ಸೆ ಮುಂದುವರಿಸಿದರೂ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡುಬರಲಿಲ್ಲ. ಈ ವೇಳೆ ಹರ್ಷಿತ್ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದು, ಬಹು ಅಂಗಾಂಗ ವೈಫಲ್ಯಕ್ಕೆ ಒಳಗಾಗಿದ್ದರು ಎನ್ನಲಾಗಿದೆ.

ಅಂತಿಮವಾಗಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಹರ್ಷಿತ್ ಮೃತಪಟ್ಟಿದ್ದಾರೆ. ಘಟನೆ ಕುಟುಂಬಸ್ಥರು ಹಾಗೂ ಸ್ನೇಹಿತರಲ್ಲಿ ಆಘಾತ ಮೂಡಿಸಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!