ರಾಷ್ಟ್ರ

ನವದೆಹಲಿ: ದೆಹಲಿಯಲ್ಲಿ ಹಂದಿಜ್ವರ ಪ್ರಕರಣಗಳ ಏರಿಕೆ; ಆತಂಕ ಬೇಡ ಎಂದ ತಜ್ಞರು

ದೇಶದ ರಾಜಧಾನಿ ದೆಹಲಿಯಲ್ಲಿ ಹಂದಿಜ್ವರ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 2,308ಕ್ಕೆ ತಲುಪಿದೆ. ಆದರೆ, ದೇಶದಲ್ಲಿ ಯಾವುದೇ ಹೊಸ ಅಥವಾ ಮಾರಕ ವೈರಸ್ ರೂಪಾಂತರ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಮಳೆಗಾಲ ಹಾಗೂ ಚಳಿಗಾಲದ ಆರಂಭದಲ್ಲಿ ಸಾಮಾನ್ಯವಾಗಿ ಕಂಡುಬರುವ ಜ್ವರ ಇದಾಗಿದ್ದು, ನಾಗರಿಕರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯ ತಜ್ಞರು ತಿಳಿಸಿದ್ದಾರೆ.

ಈ ನಡುವೆ ದೆಹಲಿ ಆರೋಗ್ಯ ಸಚಿವ ಡಾ. ಪಂಕಜ್ ಸಿಂಗ್ ಅವರು ಎನ್‌ಡಿಎಂಸಿ, ಎಂಸಿಡಿ ಹಾಗೂ ಸೇನಾ ಕಂಟೋನ್ಮೆಂಟ್ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ಪರಿಸ್ಥಿತಿಯ ಕುರಿತು ಪರಿಶೀಲನೆ ನಡೆಸಿದ್ದಾರೆ.

ರಾಜಧಾನಿಯ ಆಸ್ಪತ್ರೆಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಾಕಷ್ಟು ಬೆಡ್‌ಗಳು, ಪ್ರತ್ಯೇಕ ಐಸೋಲೇಶನ್ ವಾರ್ಡ್‌ಗಳು, ವೈದ್ಯರು ಹಾಗೂ ಅಗತ್ಯ ಔಷಧಿಗಳ ದಾಸ್ತಾನು ಲಭ್ಯವಿದೆ ಎಂದು ತಿಳಿಸಲಾಗಿದೆ.

ವರದಿಯಾಗಿರುವ ಸುಮಾರು 2,300ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬಹುತೇಕ ರೋಗಿಗಳು ಸಾಮಾನ್ಯ ಚಿಕಿತ್ಸೆಯಿಂದಲೇ ಚೇತರಿಸಿಕೊಂಡು ಮನೆಗೆ ಮರಳುತ್ತಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಅಲ್ಲದೆ, ಪ್ರಸ್ತುತ ಯಾವುದೇ ರೋಗಿ ಐಸಿಯು ಅಥವಾ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿಲ್ಲ. ಇದುವರೆಗೆ ಹಂದಿಜ್ವರದಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಸಚಿವರು ಸ್ಪಷ್ಟಪಡಿಸಿದ್ದಾರೆ.

ಹೀಗಾಗಿ, ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದ್ದು, ಸಾರ್ವಜನಿಕರು ಅನಗತ್ಯವಾಗಿ ಆತಂಕಕ್ಕೊಳಗಾಗಬಾರದು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…

12 hours ago

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…

12 hours ago

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…

12 hours ago

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…

12 hours ago

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…

12 hours ago

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…

12 hours ago