ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಡಗುಂಡಿಯಲ್ಲಿ ಗೋಮಾಂಸದ ತ್ಯಾಜ್ಯ ಪತ್ತೆ; ಕಾನೂನು ಕ್ರಮಕ್ಕೆ ವಿಹಿಂಪ–ಬಜರಂಗದಳ ದೂರು

ತಾಲೂಕಿನ ನಾವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗುಂಡಿ ಪ್ರದೇಶದಲ್ಲಿ ಗೋಮಾಂಸದ ತ್ಯಾಜ್ಯ ಪತ್ತೆಯಾಗಿದ್ದು, ಈ ಸಂಬಂಧ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಲಾಗಿದೆ.

ನೇತ್ರಾವತಿ ನದಿ ತೀರದಲ್ಲಿ ಕರುಳು ಸೇರಿದಂತೆ ಮಾಂಸದ ತ್ಯಾಜ್ಯಗಳನ್ನು ಎಸೆದು ಹೋಗಿರುವುದು ಸಾರ್ವಜನಿಕರ ಗಮನಕ್ಕೆ ಬಂದಿದೆ. ಇದರಿಂದ ಪರಿಸರ ಮಾಲಿನ್ಯ ಉಂಟಾಗುವುದರ ಜತೆಗೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಸಂಘಟನೆಗಳು ದೂರಿನಲ್ಲಿ ಆರೋಪಿಸಿವೆ.

ನೇತ್ರಾವತಿ ನದಿಯ ನೀರನ್ನು ವಿವಿಧ ದೇವಸ್ಥಾನಗಳಲ್ಲಿ ಅಭಿಷೇಕ ಸೇರಿದಂತೆ ಧಾರ್ಮಿಕ ಕಾರ್ಯಗಳಿಗೆ ಬಳಸಲಾಗುತ್ತದೆ. ಹೀಗಾಗಿ ನದಿ ತೀರದಲ್ಲಿ ಮಾಂಸ ತ್ಯಾಜ್ಯ ಎಸೆಯುವ ಮೂಲಕ ನೀರನ್ನು ಅಪವಿತ್ರಗೊಳಿಸುವ ದುರುದ್ದೇಶದಿಂದ ಕೃತ್ಯ ಎಸಗಲಾಗಿದೆ ಎಂದು ಸಂಘಟನೆಗಳು ದೂರಿನಲ್ಲಿ ತಿಳಿಸಿವೆ.

ಅಕ್ರಮವಾಗಿ ಗೋವುಗಳ ವಧೆ ನಡೆಸಿ ತ್ಯಾಜ್ಯವನ್ನು ನದಿ ತೀರದಲ್ಲಿ ವಿಲೇವಾರಿ ಮಾಡಿರುವವರನ್ನು ಪತ್ತೆಹಚ್ಚಿ, ಘಟನೆ ಕುರಿತು ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರು ಕಂಡುಬಂದಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಆಗ್ರಹಿಸಿವೆ.

ಈ ಸಂದರ್ಭದಲ್ಲಿ ಬಜರಂಗದಳದ ಜಿಲ್ಲಾ ಸಹಸಂಯೋಜಕ ಸಂತೋಷ್ ಸರಪಾಡಿ, ವಿಹಿಂಪ ಬಂಟ್ವಾಳ ಪ್ರಖಂಡ ಕಾರ್ಯದರ್ಶಿ ದೀಪಕ್ ಅಜೆಕಳ, ಗೋರಕ್ಷಾ ಪ್ರಮುಖ್ ತಿಲಕ್ ಕಿಣಿ, ಸಾಗರ್ ಕೊಯಿಲ, ಸಂದೇಶ್ ಕಾಡಬೆಟ್ಟು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!