ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಗಂಗೊಳ್ಳಿ ಅಳಿವೆಯ ಸಮೀಪ ಪರ್ಶಿನ್ ಬೋಟ್ ಮುಳುಗಡೆ; 27 ಮೀನುಗಾರರ ರಕ್ಷಣೆ…!

ಗಂಗೊಳ್ಳಿ ಧಕ್ಕೆಯಿಂದ ಮೀನುಗಾರಿಕೆಗೆ ತೆರಳಿದ್ದ ಪರ್ಶಿನ್ ಮೀನುಗಾರಿಕಾ ಬೋಟ್‌ವೊಂದು ಧಕ್ಕೆಯ ಅನತಿ ದೂರದಲ್ಲೇ ಸಮುದ್ರದಲ್ಲಿ ಮುಳುಗಡೆಯಾದ ಘಟನೆ ನಡೆದಿದೆ.

‘ಶ್ರೀ ಬಾಲಾಂಜನೇಯ’ ಹೆಸರಿನ ಪರ್ಶಿನ್ ಬೋಟ್ ಮಧ್ಯಾಹ್ನದ ಬಳಿಕ ಮೀನುಗಾರಿಕೆಗೆ ತೆರಳಿತ್ತು. ಗಂಗೊಳ್ಳಿ ಅಳಿವೆಯ ಸಮೀಪ ಸಮುದ್ರದಲ್ಲಿ ಸಾಗುತ್ತಿದ್ದ ವೇಳೆ ಏಕಾಏಕಿ ಬೋಟ್ ಮುಳುಗಲು ಆರಂಭಿಸಿದೆ.

ಬೋಟ್ ಮುಳುಗುತ್ತಿರುವುದನ್ನು ಗಮನಿಸಿದ ಸಮೀಪದಲ್ಲಿದ್ದ ಇತರ ಮೀನುಗಾರಿಕಾ ಬೋಟ್‌ಗಳ ಮೀನುಗಾರರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಕರಾವಳಿ ಕಾವಲು ಪಡೆಯ ಸಿಬ್ಬಂದಿಯೂ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಬೋಟ್‌ನಲ್ಲಿದ್ದ 27 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಬೋಟ್‌ನ ತಳಭಾಗದ ಹಲಗೆಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದರಿಂದ ಒಳಗೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿ ಬೋಟ್ ತ್ವರಿತವಾಗಿ ಮುಳುಗಿದೆ ಎನ್ನಲಾಗಿದೆ.

ಘಟನೆಯಿಂದ ‘ಶ್ರೀ ಬಾಲಾಂಜನೇಯ’ ಪರ್ಶಿನ್ ಬೋಟ್‌ಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!