ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ನಡುವೆ ನಡೆದ ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯಗೊಂಡಿದ್ದು, ಐವರು ಮಕ್ಕಳೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ವಿಜಯಪುರದಲ್ಲಿ ನಡೆದಿದೆ.
ಮೃತರನ್ನು ತೊರವಿ ಗ್ರಾಮದ ಶೋಭಾ ಜಾಲಗೇರಿ ಹಾಗೂ ಅವರ ಮಕ್ಕಳಾದ ವಿದ್ಯಾ, ಸುವರ್ಣ, ಗೌಡೇಶ್, ಸಾನಿಕಾ ಮತ್ತು ವಿಕಾಸ ಎಂದು ಗುರುತಿಸಲಾಗಿದೆ. ಮಕ್ಕಳ ಪೈಕಿ ಓರ್ವ ಮಗು ಬುದ್ಧಿಮಾಂದ್ಯವಾಗಿತ್ತು ಎಂದು ತಿಳಿದುಬಂದಿದೆ.
ಅಡುಗೆ ಮಾಡುವ ವಿಚಾರಕ್ಕೆ ಪತಿ ಮಲಕಾರಿ ಭೀಮರಾಯ ಹಾಗೂ ಪತ್ನಿ ಶೋಭಾ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ. ಬಳಿಕ ಶೋಭಾ ಐವರು ಮಕ್ಕಳೊಂದಿಗೆ ಮನೆಯಿಂದ ಹೊರಟಿದ್ದರು.
ಈ ಕುರಿತು ಆಗಸ್ಟ್ 24ರಂದು ಪತಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಾದ ಎರಡು ದಿನಗಳ ಬಳಿಕ ನಗರದ ಹೊರವಲಯದ ಭೂತನಾಳ ಕೆರೆಯಲ್ಲಿ ಆರು ಮಂದಿಯ ಮೃತದೇಹಗಳು ಪತ್ತೆಯಾಗಿವೆ.
ವಾಯುವಿಹಾರಕ್ಕೆ ತೆರಳಿದ್ದವರು ಕೆರೆಯಲ್ಲಿ ಮೃತದೇಹಗಳನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಕೆರೆಯಿಂದ ಹೊರತೆಗೆದಿದ್ದಾರೆ.
ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣವಾಯಿತೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿದುಬರಲಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…