ಟೆಂಪೋ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಕುಕ್ಕಳ ಗ್ರಾಮದ ಸುನಿಲ್ ಎಂದು ಗುರುತಿಸಲಾಗಿದೆ. ಆ.20ರಂದು ರಾತ್ರಿ ಪುಂಜಾಲಕಟ್ಟೆಯಲ್ಲಿ ಕೆಲಸ ಮುಗಿಸಿ ನಡೆದುಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಮಡಂತ್ಯಾರು ಕಡೆಯಿಂದ ಪುಂಜಾಲಕಟ್ಟೆ ಕಡೆಗೆ ಬರುತ್ತಿದ್ದ ಟೆಂಪೋ ಸುನಿಲ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಸುನಿಲ್ ಗಂಭೀರವಾಗಿ ಗಾಯಗೊಂಡಿದ್ದರು.
ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುನಿಲ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…