ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಹಾಗೂ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯುವುದೇ ಅವರಿಗೆ ಸಲ್ಲಿಸುವ ಶ್ರೇಷ್ಠ ಗುರುದಕ್ಷಿಣೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.
ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಮಾಜದಲ್ಲಿ ಸಂಘರ್ಷಕ್ಕೆ ಅವಕಾಶ ನೀಡದೆ ಅಹಿಂಸೆಯ ಮಾರ್ಗದ ಮೂಲಕ ಪರಿವರ್ತನೆ ತಂದ ಮಹಾನ್ ಸಮಾಜ ಸುಧಾರಕರಲ್ಲಿ ನಾರಾಯಣ ಗುರುಗಳು ಪ್ರಮುಖರಾಗಿದ್ದಾರೆ. ಅವರ ತತ್ವ-ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಪಾಲಿಸಿಕೊಂಡು ಹೋದರೆ ಅದೇ ಅವರಿಗೆ ಸಲ್ಲಿಸುವ ದೊಡ್ಡ ಗುರುದಕ್ಷಿಣೆಯಾಗುತ್ತದೆ ಎಂದು ರಾಜೇಶ್ ನಾಯ್ಕ್ ಹೇಳಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…