ಉತ್ತರ ಪ್ರದೇಶದ ಕಾನ್ಪುರದಲ್ಲಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.
ಆ.27ರಂದು ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡ ಘಟನೆ ನಡೆದಿತ್ತು. ಘಟನೆಯಲ್ಲಿ ಅಭಿಷೇಕ್ ಪೂಜಾರಿ ಮೃತಪಟ್ಟಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹರಿದಾಡಿತ್ತು. ಈ ಹಿನ್ನೆಲೆಯಲ್ಲಿ ಅವರ ಕುಟುಂಬದ ಹಿನ್ನೆಲೆ ಹಾಗೂ ಘಟನೆಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿದೆ.
ಅಭಿಷೇಕ್ ಪೂಜಾರಿ ಅವರು ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆ ಮೂಲದವರು. ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ಪೈಲಟ್ ಆಗಿ ತರಬೇತಿ ಪಡೆಯುತ್ತಿದ್ದರು ಎನ್ನಲಾಗಿದೆ.
ಅವರ ತಂದೆ ಪ್ರಭಾಕರ ಪೂಜಾರಿ ಹಾಗೂ ತಾಯಿ ಶಶಿಕಲಾ ಪೂಜಾರಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ ವಾಸವಾಗಿದ್ದಾರೆ. ಅಭಿಷೇಕ್ ಆಗಾಗ್ಗೆ ಕುಟುಂಬದೊಂದಿಗೆ ಕಣಜಾರು ಗ್ರಾಮದ ಕಡೇಬೆರ್ಕೆಯಲ್ಲಿರುವ ತಾಯಿಯ ಸಹೋದರ ಜೀವನ್ ಕುಮಾರ್ ಅವರ ಮನೆಗೆ ಬಂದು ಹೋಗುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಕುಟುಂಬಸ್ಥರು ಮುಂದಿನ ಪ್ರಕ್ರಿಯೆಗಳಿಗಾಗಿ ಕಾನ್ಪುರಕ್ಕೆ ತೆರಳಿದ್ದಾರೆ. ಘಟನೆಗೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಗಳು ಮುಂದುವರಿದಿವೆ ಎಂದು ತಿಳಿದುಬಂದಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…