ಕಳೆದ ಕೆಲ ದಿನಗಳಿಂದ ಬಳ್ಳ ಪ್ರದೇಶದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳ ಹಿಂಡು ಶುಕ್ರವಾರ ಐತೂರು ಗ್ರಾಮದತ್ತ ತೆರಳಿ ಅರಣ್ಯ ಇಲಾಖೆಯ ರಬ್ಬರ್ ತೋಟಕ್ಕೆ ನುಗ್ಗಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಹಿಂಡಿನಲ್ಲಿ ಎರಡು ಮರಿಯಾನೆಗಳು ಸೇರಿದಂತೆ ಒಟ್ಟು ಎಂಟು ಕಾಡಾನೆಗಳಿವೆ ಎಂದು ತಿಳಿದುಬಂದಿದೆ. ಬಳ್ಳ ಗ್ರಾಮದ ಪಠೋಳಿ ಪ್ರದೇಶದಲ್ಲಿ ಕಾಡಾನೆಗಳ ಹೆಜ್ಜೆ ಗುರುತುಗಳು ಪತ್ತೆಯಾದ ಬಳಿಕ ಹಿಂಡು ಕಲ್ಕಲ್ ಪ್ರದೇಶದತ್ತ ಸಾಗಿತ್ತು.
ಈ ವೇಳೆ ಕಾಡಾನೆಗಳು ಹಲವು ಬೈನೆ ಮರಗಳನ್ನು ಮುರಿದು ಹಾನಿಗೊಳಿಸಿವೆ ಎನ್ನಲಾಗಿದೆ. ಬಳಿಕ ಆನೆಗಳ ಹಿಂಡು ಎಣ್ಣೆಮಜಲು ಸಮೀಪದ ಬೀರಿಕಾಡು ಪ್ರದೇಶದ ಮೂಲಕ ಸಾಗಿದ್ದು, ನದಿಯನ್ನು ದಾಟಿ ಐತೂರು ಗ್ರಾಮದ ಏನ್ಕೂಪ್ ಕ್ವಾರ್ಟರ್ಸ್ ಹಾಗೂ ಓಟಕಜೆ ಪರಿಸರದ ಮೂಲಕ ಸಂಚರಿಸಿದೆ.
ಬಳಿಕ ಕಾಡಾನೆಗಳ ಹಿಂಡು ಅರಣ್ಯ ಇಲಾಖೆಯ ರಬ್ಬರ್ ತೋಟವನ್ನು ಪ್ರವೇಶಿಸಿದ್ದು, ಸದ್ಯ ಇದೇ ಪ್ರದೇಶದಲ್ಲಿ ಬೀಡುಬಿಟ್ಟಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಾಡಾನೆಗಳು ವಸತಿ ಪ್ರದೇಶ ಹಾಗೂ ಕೃಷಿ ಜಮೀನುಗಳ ಸಮೀಪದಲ್ಲೇ ಇರುವುದರಿಂದ ರೈತರು, ತೋಟದ ಕಾರ್ಮಿಕರು ಹಾಗೂ ಶಾಲಾ ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಾಗಿದೆ.
ಗ್ರಾಮಸ್ಥರು ಪರಸ್ಪರ ಮಾಹಿತಿ ಹಂಚಿಕೊಂಡು ಎಚ್ಚರಿಕೆಯಿಂದ ಇರುವಂತೆ ಸೂಚಿಸುತ್ತಿದ್ದು, ವಿಶೇಷವಾಗಿ ಒಂಟಿಯಾಗಿ ಸಂಚರಿಸದಂತೆ ಮನವಿ ಮಾಡುತ್ತಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…