ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಓಣಂ ಆಚರಣೆ ವೇಳೆ ತೆರೆದ ಬಾವಿಗೆ ಬಿದ್ದು 15 ವರ್ಷದ ವಿದ್ಯಾರ್ಥಿ ಸಾವು…!

ಓಣಂ ಹಬ್ಬದ ಆಚರಣೆ ವೇಳೆ 15 ವರ್ಷದ ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಕಾಞ್ಹಂಗಾಡ್ ಸಮೀಪದ ಚೀಮೇನಿಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಕೊಡಕ್ಕಾಡ್‌ನ ಆನಿಕ್ಕಾಡಿ ನಿವಾಸಿ ಧನೇಶ್ ಅವರ ಪುತ್ರ ಸನೂಪ್ ಎಂದು ಗುರುತಿಸಲಾಗಿದೆ. ಚೀಮೇನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ನಡೆದ ಓಣಂ ಕಾರ್ಯಕ್ರಮದಲ್ಲಿ ಸನೂಪ್ ಭಾಗವಹಿಸಿದ್ದರು. ಈ ವೇಳೆ ಸಹಪಾಠಿಗಳೊಂದಿಗೆ ಹೊರಗೆ ತೆರಳಿದ್ದಾಗ ಸಮೀಪದಲ್ಲಿದ್ದ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸನೂಪ್ ಅವರನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ.

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕಣ್ಣೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸನೂಪ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸನೂಪ್ ಅವರು ಚೆರುವತ್ತೂರಿನ ತಿಮಿರಿ ಕುಟ್ಟಮಠ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!