ಓಣಂ ಹಬ್ಬದ ಆಚರಣೆ ವೇಳೆ 15 ವರ್ಷದ ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಕಾಞ್ಹಂಗಾಡ್ ಸಮೀಪದ ಚೀಮೇನಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕೊಡಕ್ಕಾಡ್‌ನ ಆನಿಕ್ಕಾಡಿ ನಿವಾಸಿ ಧನೇಶ್ ಅವರ ಪುತ್ರ ಸನೂಪ್ ಎಂದು ಗುರುತಿಸಲಾಗಿದೆ. ಚೀಮೇನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ನಡೆದ ಓಣಂ ಕಾರ್ಯಕ್ರಮದಲ್ಲಿ ಸನೂಪ್ ಭಾಗವಹಿಸಿದ್ದರು. ಈ ವೇಳೆ ಸಹಪಾಠಿಗಳೊಂದಿಗೆ ಹೊರಗೆ ತೆರಳಿದ್ದಾಗ ಸಮೀಪದಲ್ಲಿದ್ದ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸನೂಪ್ ಅವರನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ.
ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕಣ್ಣೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸನೂಪ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸನೂಪ್ ಅವರು ಚೆರುವತ್ತೂರಿನ ತಿಮಿರಿ ಕುಟ್ಟಮಠ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…