ಜನ ಮನದ ನಾಡಿ ಮಿಡಿತ

Advertisement

ತುಮಕೂರು: ಎರಡು ಕಾರುಗಳ ಮುಖಾಮುಖಿ ಡಿಕ್ಕಿ; ನಾಲ್ವರು ಸಾವು, ಮೂವರಿಗೆ ಗಂಭೀರ ಗಾಯ…!

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗೇಟ್ ಬಳಿ ನಡೆದಿದೆ.

ತುರುವೇಕೆರೆ ಕಡೆಯಿಂದ ಬರುತ್ತಿದ್ದ ಕಿಯಾ ಕಾರು ಹಾಗೂ ಚಿಕ್ಕನಾಯಕನಹಳ್ಳಿ ಕಡೆಯಿಂದ ಬರುತ್ತಿದ್ದ ವೋಕ್ಸ್‌ವ್ಯಾಗನ್ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡೂ ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿವೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಗರ್ಭಿಣಿ ಮಹಿಳೆ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಕಾರುಗಳಿಂದ ಹೊರತೆಗೆದು ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತದ ತೀವ್ರತೆಗೆ ಕಾರಿನೊಳಗೆ ಸಿಲುಕಿದ್ದವರನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ ವಿವೇಕ್, ಅನಿಲ್ ಹಾಗೂ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಾಳುಗಳ ರಕ್ಷಣೆಗೆ ನೆರವಾಗಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!